- Advertisement -
Hubli News: ಹುಬ್ಬಳ್ಳಿ: ಡಿಕೆಶಿ ಹಾಗೂ ಸಿಎಂ ಬಣ ರಾಜಕೀಯ ಅಂತ ಏನಿಲ್ಲಾ. ಈಗಾಗಲೇ ಸಿಎಂ ಹಾಗೂ ಡಿಸಿಎಂ ಸ್ಪಷ್ಟೀಕರಣ ನೀಡಿದ್ದಾರೆ. ಸಿಎಂ ಬದಲಾವಣೆ ಈಗ ಅಪ್ರಸ್ತುತ ಎಂದು ಸಚಿವ ಸಂತೋಷ ಲಾಡ್ ಹೇಳಿದರು.
ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅದು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಅದು ಸಿಎಂ ಮತ್ತು ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು ಎಂದರು.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಅಭಿವೃದ್ದಿ ವಿಚಾರವಾಗಿ ಚರ್ಚೆಗೆ ಅವಕಾಶ ನೀಡುತ್ತೇವೆ. ಆದ್ರೆ ವಿಪಕ್ಷಗಳು ಅದಕ್ಕೆ ವಿರೋಧ ಮಾಡದೇ ಚರ್ಚೆಗೆ ಅವಕಾಶ ಮಾಡಿಕೊಡಬೇಕು. ಅಭಿವೃದ್ದಿ ಬಗ್ಗೆ ಚರ್ಚೆಗಳಾಗಬೇಕು ಅನ್ನೋದು ನಮ್ಮ ಉದ್ದೇಶ. ಆದ್ರೆ ಅಭಿವೃದ್ದಿ ಬಗ್ಗೆ ವಿಪಕ್ಷ ನಾಯಕರು ಚರ್ಚೆ ಮಾಡಲು ಬಿಡೋದೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
- Advertisement -