Sunday, November 16, 2025

Latest Posts

Political News: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯದ ಬಗ್ಗೆ ಮೌನ ಮುರಿದ ಸಿಎಂ ಸಿದ್ದರಾಮಯ್ಯ

- Advertisement -

Political News: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಇಂದು ಸಿಎಂ ಸಿದ್ದರಾಮಯ್ಯನವರೇ ಪ್ರತಿಕ್ರಿಯಿಸಿದ್ದಾರೆ.

ಬಿಹಾರದ ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಿಎಂ, ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ. ಬಿಹಾರ ಮತದಾರರಿಗೆ ಮತನೀಡಲು ಕೋರಲಾಗುವುದು. ಬಿಹಾರದಲ್ಲಿನ ಅಧಿಕಾರ ವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟಾಚಾರ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿವೆ ಎಂದು ಸಿಎಂ ಹೇಳಿದ್ದಾರೆ.

ಬಿಹಾರದಲ್ಲಿ ಎನ್.ಡಿ.ಎ ಮೈತ್ರಿಕೂಟವೂ ರಾಜ್ಯದ ಗ್ಯಾರಂಟಿ ಯೋಜನೆಗಳ ಭರವಸೆಯ ಮಾದರಿಯನ್ನು ಅನುಸರಿಸಿದೆ. ಕರ್ನಾಟಕದಲ್ಲಿ 1.24 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ. ಗೃಹಲಕ್ಷ್ಮಿ ಹಣ ನೀಡಲಾಗುತ್ತಿದೆ. ಇದುವರೆಗೆ ರಾಜ್ಯದಲ್ಲಿ ₹1 ಲಕ್ಷ ಕೋಟಿಗೂ ಹೆಚ್ಚು ಮೊತ್ತವನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹಲವು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದ್ದು,ಅವರಿಗೆ ಯಾವುದೇ ಸಿದ್ಧಾಂತವಿಲ್ಲ. ಬಿಹಾರದಲ್ಲಿ ಬಡತನ ನಿರ್ಮೂಲನೆಯಾಗಿಲ್ಲ. ಆದ್ದರಿಂದ ಬಡವರು, ಹಿಂದುಳಿದವರು, ದಲಿತರು ಹಾಗೂ ಅಲ್ಪಸಂಖ್ಯಾತರು ಕಾಂಗ್ರೆಸ್ ಪರ ಮತಚಲಾಯಿಸುವ ಭರವಸೆಯಿದೆ.

ಮುಖ್ಯಮಂತ್ರಿ ಬದಲಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಜನರು ಅಭಿಪ್ರಾಯವೇನೇ ಇದ್ದರೂ ಹೈಕಮಾಂಡ್ ನ ನಿರ್ಧಾರವೇ ಅಂತಿಮ. ಪಕ್ಷದ ವರಿಷ್ಠರು ಈ ಬಗ್ಗೆ ಏನೂ ಹೇಳಿರುವುದಿಲ್ಲ. ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ಸಂಪುಟ ಪುನರ್‌ರಚನೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

Latest Posts

Don't Miss