Political News: ಬಾಲಿವುಡ್ ನಟ ಅಮೀರ್ ಖಾನ್ ಸಿಎಂ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಅಚಾನಕ್ ಆಗಿ ಭೇಟಿಯಾಗಿದ್ದು, ಕುಶಲೋಪರಿ ವಿಚಾರಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲು, ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿ ಭವನಕ್ಕೆ ತೆರಳಿದ್ದರು. ಇದೇ ವೇಳೆ ನಟ ಅಮೀರ್ ಖಾನ್ ಕೂಡ ಅಲ್ಲೇ ಇದ್ದರು. ಈ ವೇಳೆ ಭೇಟಿಯಾಗಿ, ಕೆಲ ಸಮಯ ಮಾತನಾಡಿದ್ದು, ಅಮೀರ್ ಖಾನ್ ನಿರ್ಮಾಣದ ಸಿತಾರೆ ಜಮೀನ್ ಪರ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ“ಂಡಿರುವ ಸಿಎಂ ಸಿದ್ದರಾಮಯ್ಯ, ದೆಹಲಿಯಲ್ಲಿ ಇಂದು ರಾಷ್ಟ್ರಪತಿಗಳ ಭೇಟಿಗಾಗಿ ರಾಷ್ಟ್ರಪತಿ ಭವನಕ್ಕೆ ತೆರಳಿದ ವೇಳೆ ಬಾಲಿವುಡ್ನ ಸಂವೇದನಾಶೀಲ ನಟ, ನಿರ್ದೇಶಕ ಅಮಿರ್ ಖಾನ್ ಅವರು ಆಕಸ್ಮಿಕವಾಗಿ ಎದುರಾದರು. ಸಿನೆಮಾ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವ, ಧನಾತ್ಮಕ ಬದಲಾವಣೆಗೆ ತುಡಿಯುವ ಅವರೊಳಗಿನ ಸಮಾಜಮುಖಿ ವ್ಯಕ್ತಿತ್ವ ನಟನೆಯನ್ನು ಮೀರಿ ಜನರಿಗೆ ಅವರನ್ನು ಹೆಚ್ಚು ಆಪ್ತವಾಗಿಸಿದೆ. ಅವರ ಮುಂದಿನ ಚಿತ್ರಗಳಿಗೆ ಶುಭವಾಗಲಿ ಎಂದು ಹಾರೈಸಿ, ಆರೋಗ್ಯದ ಕಾಳಜಿ ವಹಿಸುವಂತೆ ಸಲಹೆ ನೀಡಿದೆ.