Hubballi: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕಾಂಗ್ರೆಸ್ ನಾಯಕರು ಪಾಕ್ ಏಜೆಂಟರರು. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರು ಪಾಕಿಸ್ತಾನದ ಏಜೆಂಟರರು. ಅವರದ್ದೇ ಒಂದು ನಿಯೋಗ ಪಾಕಿಸ್ತಾನಕ್ಕೆ ಕೊಂಡೊಯ್ದು ಭಾರತ ದಾಳಿ ಮಾಡಿರುವ ಸ್ಥಳಗಳನ್ನು ನೋಡಿಕೊಂಡು ಬರಲಿ ಎಂದು ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಪರೇಷನ್ ಸಿಂಧೂರ ಕುರಿತು ಕಾಂಗ್ರೆಸ್ ನಾಯಕರು ಅವಹೇಳನ ಮಾಡುತ್ತಿದ್ದಾರೆ ಎಂಬ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಯತ್ನಾಳ್, ಪಾಕಿಸ್ತಾನದ ಉಗ್ರರ ಹಾಗೂ ವಾಯು ನೆಲೆಗಳ ಮೇಲೆ ಭಾರತ ದಾಳಿ ನಡೆಸಿದ್ದು, ವಿದೇಶಗಳ ಮಾಧ್ಯಮಗಳು ಸಾಕ್ಷಿ ಸಮೇತ ಸುದ್ದಿ ಮಾಡುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಸಹ ಅದನ್ನೇ ದಾಳಿ ನಡೆಸಿರುವ ಸ್ಥಳಗಳ ಬಗ್ಗೆ ಹೇಳಿದ್ದಾರೆ. ಕಾಂಗ್ರೆಸ್ ನಾಯಕರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಸತ್ಯಾಸತ್ಯತೆಗೆ ಕಾಂಗ್ರೆಸ್ ನಿಯೋಗ ಹೋಗಿ ಪರಿಶೀಲನೆ ಮಾಡಿ ಬರಲಿ. ಹೇಗಿದ್ದರೂ ಅವರು ಪಾಕಿಸ್ತಾನದ ಏಜೆಂಟರಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಜವಾಹರಲಾಲ್ ನೆಹರೂ ಪ್ರಧಾನಮಂತ್ರಿ ಆಗಿದ್ದಾಗಲೂ ಯುದ್ಧ ನಡೆದಿತ್ತು. ಆಗ ಅವರು ಯದ್ಧ ನಡೆದ ಗಡಿ ಪ್ರದೇಶಕ್ಕೆ ತೆರಳಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಗಡಿಗೆ ಹೋಗಿ, ಸೈನಿಕರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ. ಸೈನಿಕರ ವಿಷಯದಲ್ಲಿ ಯಾರೂ ರಾಜಕೀಯ ಮಾಡಬಾರದು. ಗಾಂಧೀಜಿ ಇದ್ದಿದ್ದರೆ, ಕಾಶ್ಮೀರವನ್ನು ಪಾಕಿಸ್ತಾನಕ್ಕೆ ನೀಡಿ, ₹55 ಸಾವಿರ ಕೋಟಿ ನೀಡುವಂತೆ ಒತ್ತಾಯಿಸಿ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದರು. ‘ಸಚಿವರಾದ ಪ್ರಿಯಾಂಕ್ ಖರ್ಗೆ, ಸಂತೋಷ ಲಾಡ್, ಶಾಸಕ ಮಂಜುನಾಥ ಅವರಿಗೆ ಸಾಮಾನ್ಯ ಜ್ಞಾನ ಮತ್ತು ದೇಶ ಭಕ್ತಿಯೇ ಇಲ್ಲ.
ದೇಶಕ್ಕಿಂತ ಅವರಿಗೆ ಮುಸ್ಲಿಮ್ ವೋಟ್ ಬ್ಯಾಂಕ್ ಹಾಗೂ ರಾಜಕಾರಣ ಹೆಚ್ಚಾಗಿದೆ. ಲಾಡ್ ಶಿವಾಜಿ ಪ್ರೇಮಿ ಅಲ್ಲಾ ಅಫಜ್ ಪ್ರೇಮಿ. ಭಾರತ ವಿಭಜನೆಯಾಗುವುದಕ್ಕಿಂತ ಮೊದಲು ಸಹ ಕಾಂಗ್ರೆಸ್ ಇದನ್ನೇ ಮಾಡಿತ್ತು. ಮುಸ್ಲಿಮರನ್ನು ಪಾಕಿಸ್ತಾನಕ್ಕೆ ಕಳುಹಿಸಿ ಎಂದು ಡಾ. ಬಿ.ಆರ್. ಅಂಬೇಡ್ಕರ್ ಹೇಳಿದ್ದರು. ಗಾಂಧೀಜಿ ಮತ್ತು ನೆಹರೂ ಅವರ ಮಾತು ಕೇಳಿದ್ದರೆ ಈ ಪರಿಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ. ವೋಟ್ ಬ್ಯಾಂಕ್‌ಗಾಗಿ ಹೇಳಿಕೆ ನೀಡುವ ಪ್ರಿಯಾಂಕ್ ಖರ್ಗೆ ಅವರದ್ದು ದೇಶಕ್ಕೆ ಕೊಡುಗೆ ಏನಿದೆ? ಯೌವ್ವನ, ಅಧಿಕಾರಿ ಮತ್ತು ಹಣದಿಂದಾಗಿ ದೇಶದ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಯತ್ನಾಳ್ ಕಿಡಿ ಕಾರಿದ್ದಾರೆ.