Political News: ನ್ಯಾಷನಲ್ ಹೆರಾಲ್ಡ್ ಹಗರಣದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಕಾಂಗ್ರೆಸ್ ಕುಟುಂಬದ ನಿಷ್ಕ್ರಿಯವಾಗಿರುವ ಪತ್ರಿಕೆಗಾಗಿ, ರಾಜ್ಯದ ಖಜಾನೆಯನ್ನು ಲೂಟಿ ಮಾಡಿದೆ. ರಾಜ್ಯದಲ್ಲಿ ಅಸ್ಥಿತ್ವದಲ್ಲಿರದ, ದೇಶದಲ್ಲಿರುವ ರಾಷ್ಟ್ರೀಯ ಪತ್ರಿಕೆಗಳನ್ನು ಹೊರಗಿಟ್ಟ ಕರ್ನಾಟಕದ ಕಾಂಗ್ರೆಸ್ ಸರ್ಕಾರ ನ್ಯಾಷನಲ್ ಹೆರಾಲ್ಡ್‌ಗೆ ಜಾಹೀರಾತು ಹಣವನ್ನು ಏಕೆ ನೀಡಿದೆ? ಎಂದು ಜೋಶಿ ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ನಿಷ್ಕ್ರಿಯವಾಗಿರುವ ದಿನಪತ್ರಿಕೆಗೆ ಹಣವನ್ನು ನೀಡಿ, ರಾಷ್ಟ್ರೀಯ ದಿನಪತ್ರಿಕೆಗಳು- ಸುಮಾರು 69% ಓದುಗರನ್ನು ಹೊಂದಿರುವ ಪತ್ರಿಕೆಗಳನ್ನು ಮಲಗಿಸಿ, ಕೇವಲ ತನ್ನ ಪತ್ರಿಕೆಗೆ ಹಣವನ್ನು ಸುರಿದು, ವಿಶ್ವಾಸಾರ್ಹ ದಿನಪತ್ರಿಕೆಗಳಿಗೆ ಏನೂ ಸಿಗದಂತೆ ಲೂಟಿ ಮಾಡಿದೆ. ಈ ನಿರ್ಧಾರವೇಕೇ? ‘ನಕಲಿ’ ಗಾಂಧಿ ಕುಟುಂಬವನ್ನು ಮತ್ತಷ್ಟು ಓಲೈಸಲು ಮಾಡಿದ ಪಿತೂರಿಯೇ?
ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಜಾಮೀನಿನ ಮೇಲೆ ಬಿಡುಗಡೆಯಾದಾಗ, ಕಾಂಗ್ರೆಸ್ ಸರ್ಕಾರವು 2024–25ರಲ್ಲಿ ₹1 ಕೋಟಿಯ ಬದಲಿಗೆ ₹ 3 ಕೋಟಿ ಹಣ ನೀಡಿತು. ಕರ್ನಾಟಕದಲ್ಲಿ ಆಡಳಿತವೆಲ್ಲಿದೆ? ರಾಜ್ಯದ ಜನರು ಅಭಿವೃದ್ಧಿಗಾಗಿ ಹಣವನ್ನು ಪಡೆದಿಲ್ಲ. ಗೃಹಲಕ್ಷ್ಮಿ ಫಲಾನುಭವಿಗಳು ಹಣವನ್ನು ಪಡೆದಿಲ್ಲ. ನಿಷ್ಕ್ರಿಯವಾದ ಪತ್ರಿಕೆ ಕಾಂಗ್ರೆಸ್ ಆಡಳಿತದಲ್ಲಿ ಹಣವನ್ನು ಪಡೆಯುತ್ತದೆ. ಇದು ದುರಾಡಳಿತದ ಪರಮಾವಧಿ, ಅಧಿಕಾರದ ದುರುಪಯೋಗ ಮತ್ತು ಹಗಲು ದರೋಡೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಕುಟುಂಬದ ನಿಷ್ಕ್ರಿಯವಾಗಿರುವ ಪತ್ರಿಕೆಗಾಗಿ, ರಾಜ್ಯದ ಖಜಾನೆಯನ್ನು ಲೂಟಿ ಮಾಡಿದೆ.
ರಾಜ್ಯದಲ್ಲಿ ಅಸ್ಥಿತ್ವದಲ್ಲಿರದ, ದೇಶದಲ್ಲಿರುವ ರಾಷ್ಟ್ರೀಯ ಪತ್ರಿಕೆಗಳನ್ನು ಹೊರಗಿಟ್ಟ ಕರ್ನಾಟಕದ ಕಾಂಗ್ರೆಸ್ ಸರ್ಕಾರ ನ್ಯಾಷನಲ್ ಹೆರಾಲ್ಡ್‌ಗೆ ಜಾಹೀರಾತು ಹಣವನ್ನು ಏಕೆ ನೀಡಿದೆ?
ರಾಜ್ಯದಲ್ಲಿ ನಿಷ್ಕ್ರಿಯವಾಗಿರುವ ದಿನಪತ್ರಿಕೆಗೆ ಹಣವನ್ನು…
— Pralhad Joshi (@JoshiPralhad) January 8, 2026




