- Advertisement -
Political News: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹೋದರ, ಮಾಜಿ ಸಂಸದ ಡಿ.ಕೆ.ಸುರೇಶ್ ಬಮೂಲ್ ನಿರ್ದೇಶಕವಾಗಿ ಆಯ್ಕೆಯಾಗಿದ್ದಾರೆ. ಶನಿವಾರ ಸುರೇಶ್ ಬಮೂಲ್ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ ಅವರ ಜತೆ ನಾಮಪತ್ರ ಸಲ್ಲಿಸಿದವರ ನಾಮಪತ್ರಗಳು ಅಮಾನ್ಯವಾಗಿರುವ ಕಾರಣ, ಡಿ.ಕೆ.ಸುರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದೀಗ ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಗುರಿ ಇಟ್ಟಿರುವ ಡಿ.ಕೆ.ಸುರೇಶ್, ತಮಗೆ ಬೆಂಬಲ ಬೇಕಿರುವ ಸಲುವಾಗಿ, ರಾಜ್ಯದಲ್ಲಿನ ಹಾಲು ಒಕ್ಕೂಟ ಮಂಡಳಿಗಳಿಗೆ ತಮ್ಮದೇ ಪಕ್ಷದ ಸದಸ್ಯರನ್ನು ನಿರ್ದೇಶನ ಮಾಡುವ ಗುರಿ ಹೊಂದಿದ್ದಾರೆ ಎನ್ನಲಾಗಿದೆ.
ಇನ್ನು ಬಮೂಲ್ ನಿರ್ದೇಶಕರಾಗಿ ಆಯ್ಕೆಯಾದ ಬಳಿಕ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.
- Advertisement -