Political News: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಅಹಿಂದ ವರ್ಗದ ಮತದಾರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ನೂತನ ಸಚಿವ ಸಂಪುಟದಲ್ಲಿ ಅಹಿಂದ ವರ್ಗಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಅಹಿಂದ ಮುಖಂಡ ಸಿದ್ದು ತೇಜಿ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಹಿಂದ ಬಲದಿಂದಲೇ Siddaramaiah ಅವರು ಮುಖ್ಯಮಂತ್ರಿಯಾಗಿದ್ದರು. ಅವರ ಅವಧಿಯಲ್ಲಿ ಅಹಿಂದ ವರ್ಗದ ನಾಯಕರಿಗೆ ಸಚಿವ ಹಾಗೂ ಸ್ಪೀಕರ್ ಹುದ್ದೆಗಳನ್ನು ನೀಡಿ ಸಾಮಾಜಿಕ ನ್ಯಾಯ ಕಲ್ಪಿಸುವ ಕೆಲಸ ಮಾಡಲಾಗಿತ್ತು ಎಂದರು.
ಹೊಸ ಸಚಿವ ಸಂಪುಟದಲ್ಲಿ ಅಹಿಂದ ವರ್ಗಕ್ಕೆ 20 ರಿಂದ 22 ಸಚಿವ ಸ್ಥಾನಗಳು ಹಾಗೂ 3 ರಿಂದ 4 ಉಪಮುಖ್ಯಮಂತ್ರಿ ಹುದ್ದೆಗಳನ್ನು ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.
ಅಹಿಂದ ವರ್ಗಕ್ಕೆ ನ್ಯಾಯ ಸಿಗದಿದ್ದರೆ ಇದೇ 7ರಂದು ಬೆಂಗಳೂರಿನಲ್ಲಿ ಸಭೆ ನಡೆಸಿ, ಬಳಿಕ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ತಿಳಿಸಿದರು.
ಸಚಿವ ಸಂಪುಟ ರಚನೆಗೂ ಮುನ್ನವೇ ಅಹಿಂದ ವರ್ಗಕ್ಕೆ ಹೆಚ್ಚಿನ ಪ್ರಾತಿನಿಧ್ಯದ ಬೇಡಿಕೆ ಕೇಳಿಬಂದಿದ್ದು, ಹೈಕಮಾಂಡ್ ಈ ಒತ್ತಾಯಕ್ಕೆ ಹೇಗೆ ಸ್ಪಂದಿಸಲಿದೆ ಎಂಬುದು ಕಾದು ನೋಡಬೇಕಿದೆ.
ಕ್ಯಾಮೆರ ಪರ್ಸನ್ ಹೇಮಂತ್ ಜೊತೆ ಸಂಗಮೇಶ ಸತ್ತಿಗೇರಿ, ಕರ್ನಾಟಕ ಟಿವಿ, ಹುಬ್ಬಳ್ಳಿ




