Political News: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಮತ್ತು ಅಮಿತ್ ಶಾ ಸೇರಿ ಹಲವು ಬಿಜೆಪಿ ನಾಯಕರು, ಮತ್ತು ಮೈತ್ರಿ ಪಕ್ಷದ ನಾಯಕರು ಭಾಗಿಯಾಗಿದ್ದರು.
ಇವರೊಂದಿಗೆ ಏಕನಾಥ್ ಶಿಂಧೆ, ಎನ್‌ಸಿಪಿ ನಾಯಕ ಅಜೀತ್ ಪವಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ದೇವೇಂದ್ರ ಫಡ್ನವೀಸ್ ಎರಡನೇಯ ಬಾರಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಮಹಾರಾಷ್ಟ್ರ ರಾಜ್ಯ ಪಾಲ ಸಿ.ಪಿ.ರಾಧಾಕೃಷ್ಣನ್ ದೇವೇಂದ್ರ ಫಡ್ನವೀಸ್‌ಗೆ ಪ್ರಮಾಣವಚನ ಬೋಧಿಸಿದರು.
ಮಹಾರಾಷ್ಟ್ರ ಚುನಾವಣೆಯಲ್ಲಿ ಮೈತ್ರ ಪಕ್ಷಗಳ ಬಲದಿಂದ ಗೆಲುವು ಸಾಧಿಸಿದ್ದ ಕಾರಣ, ಸಿಎಂ ಯಾರಾಗುತ್ತಾರೆ ಅನ್ನೋ ಕುತೂಹಲ ಜೋರಾಗಿತ್ತು. ಬಿಜೆಪಿಯೊಂದಿಗೆ ಶಿವಸೇನೆ ಮತ್ತು ಎನ್‌ಸಿಪಿ ಕೈ ಜೋಡಿಸಿದ್ದ ಕಾರಣ, ಏಕನಾಥ್ ಶಿಂಧೆ ಮತ್ತು ಫಡ್ನವೀಸ್ ಮಧ್ಯೆ ಪೈಪೋಟಿ ಇತ್ತು.
ಬಳಿಕ ಮುಂಬೈನಲ್ಲಿ ನಡೆದ ಸಮಾವೇಶದಲ್ಲಿ ಫಡ್ನವೀಸ್ ನನಗೆ ಸಿಎಂ ಆಗಲೇಬೇಕು ಎಂಬ ಆಕಾಂಕ್ಷೆ ಇಲ್ಲ, ಬಿಜೆಪಿ ಹೈಕಮಾಂಡ್ ಯಾವ ರೀತಿ ಹೇಳುತ್ತದೆಯೋ, ಆ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಎಂದಿದ್ದರು. ಬಿಜೆಪಿ ನಾಯಕ ಸುಧೀರ್ ಎಂಬುವರು ಮುಂದಿನ ಸಿಎಂ ದೇವೇಂದ್ರ ಫಡ್ನವೀಸ್ ಅಂತಲೇ ಹೇಳಿದ್ದರು. ಅಲ್ಲದೇ ಬಿಜೆಪಿ ನಿರ್ಧಾರದ ಬಗ್ಗೆ ಏಕನಾಥ್ ಶಿಂಧೆ ಕೋಪಗೊಂಡಿಲ್ಲ. ಏಕೆಂದರೆ ಶಿಂಧೆಯವರಿಗೆ ಮಹಾರಾಷ್ಟ್ರ ಸರ್ಕಾರದಲ್ಲಿ ಸಿಗಬೇಕಾದ ಸ್ಥಾನ ಸಿಗಲಿದೆ ಎಂದಿದ್ದರು. ಇದೀಗ ಫಡ್ನವೀಸ್ ಸಿಎಂ ಆಗಿದ್ದು, ಶಿಂಧೆ ಉಪಮುಖ್ಯಮಂತ್ರಿಯಾಗಿದ್ದಾರೆ.