Political News: ಧಾರವಾಡ: ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದ್ದು, ಆ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ..
ಈ ತೀರ್ಪು ಪ್ರಕಟವಾಗುತ್ತಿದ್ದಂತೆ, ಮಾಧ್ಯಮಗಳ ಜೊತೆ ಮಾತನಾಡಿರುವ ಸ್ನೇಹಮಯಿ ಕೃಷ್ಣ, ನಾನು ಹೋರಾಟ ಮುಂದುವರಿಸುತ್ತೇನೆ. ಹೈಕೋರ್ಟ್ ಆದೇಶ ಪ್ರಶ್ನಿಸಿ, ಸುಪ್ರೀಕೋರ್ಟ್ ಮೆಟ್ಟಿಲೇರುತ್ತೇನೆ. ಹೈಕೋರ್ಟ್ ಆದೇಶ ಪ್ರತಿ ಸಿಕ್ಕಿದ ಬಳಿಕ, ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸುತ್ತೇನೆ. ಲೋಕಾಯುಕ್ತ ತನಿಖೆ ಬಗ್ಗೆ ನನಗೆ ನಂಬಿಕೆ ಇಲ್ಲ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.




