Friday, December 27, 2024

Latest Posts

Political News: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನಕ್ಕೆ ರಾಜಕೀಯ ಗಣ್ಯರ ಸಂತಾಪ

- Advertisement -

Political News: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಯೋಸಹಜ ಖಾಯಿಲೆಯಿಂದ ಬಳಲಿ ಇಂದು ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮನಮೋಹನ್ ಸಿಂಗ್ ನಿಧನಕ್ಕೆ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ, ಮತ್ತು ನಾನು ಗುಜರಾತ್ ಸಿಎಂ ಆಗಿದ್ದಾಗ, ಆಡಳಿತ ವಿಚಾರದ ಬಗ್ಗೆ ಹಲವು ಬಾರಿ ಸಂವಹನ ನಡೆಸಿದ್ದೇವೆ. ಓಂ ಶಾಂತಿ ಎಂದು ಮನಮೋಹನ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಕೂಡ ಈ ಬಗ್ಗೆ ಟ್ವೀಟ್ ಮಾಡಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು.

ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ. ಮಾತಿಗಿಂತ ಕೃತಿ‌ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ. ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

https://twitter.com/siddaramaiah/status/1872333601091518846

ಭಾರತದ ಮಾಜಿ ಪ್ರಧಾನಮಂತ್ರಿಗಳು, ಪ್ರಖ್ಯಾತ ವಿತ್ತತಜ್ಞರು, ಆರ್ಥಿಕ ಸುಧಾರಣೆಗಳ ಹರಿಕಾರರೂ ಆಗಿದ್ದ ಡಾ.ಮನಮೋಹನ್ ಸಿಂಗ್ ಅವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ದೂರದೃಷ್ಟಿ, ಸಂಯಮ ಮತ್ತು ತಮ್ಮ ಆರ್ಥಿಕ ಮೇದಸ್ಸಿನಿಂದ ರಾಷ್ಟ್ರವನ್ನು ದುರಿತ ಕಾಲದಲ್ಲಿ ಸಶಕ್ತವಾಗಿ ಮುನ್ನಡೆಸಿದ್ದ ಮನಮೋಹನ್ ಸಿಂಗ್ ಅವರು ದೇಶಕ್ಕೆ ನೀಡಿರುವ ಕೊಡುಗೆ ಅಪಾರ. ಆರ್ಥಿಕ ಸುಧಾರಣೆಗಳ ಮೂಲಕ ಭಾರತಕ್ಕೆ ಜಾಗತಿಕ ಮನ್ನಣೆ ತಂದುಕೊಟ್ಟವರು ಅವರು. ಅವರ ಕೊಡುಗೆಗಳು ಚಿರಸ್ಮರಣೀಯ. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಟ್ವೀೀಟಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ರಾಜನೀತಿ, ಸಮಗ್ರತೆ ಮತ್ತು ಶಾಂತ ಶಕ್ತಿಯಿಂದ ವ್ಯಾಖ್ಯಾನಿಸಲಾದ ಯುಗವು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಜಿ ಅವರ ನಿಧನದೊಂದಿಗೆ ಕೊನೆಗೊಳ್ಳುತ್ತದೆ. ಪ್ರಧಾನ ಮಂತ್ರಿಯಾಗಿ ಮತ್ತು ಆರ್ಥಿಕ ವಾಸ್ತುಶಿಲ್ಪಿಯಾಗಿ ರಾಷ್ಟ್ರದ ಬಗ್ಗೆ ಅವರ ದೃಷ್ಟಿಕೋನವು ಅದರ ಅತ್ಯಂತ ನಿರ್ಣಾಯಕ ಕ್ಷಣಗಳಲ್ಲಿ ನಿಜವಾಗಿಯೂ ಅವರ ಚೇತರಿಸಿಕೊಳ್ಳುವ ನಾಯಕತ್ವದ ಬಗ್ಗೆ ಹೇಳುತ್ತದೆ. ಅವರ ಅಗಲಿಕೆಯು ನನಗೆ ವೈಯಕ್ತಿಕ ನಷ್ಟದಂತೆ ಭಾಸವಾಗುತ್ತಿದೆ- ಅವರು ಅಸಾಧಾರಣ ನಾಯಕ ಮಾತ್ರವಲ್ಲ, ಅವರು ಅಸಾಧಾರಣ ಮಾನವರೂ ಆಗಿದ್ದರು! ನಿಜವಾದ ಮಣ್ಣಿನ ಮಗನಿಗೆ ನಾವು ವಿದಾಯ ಹೇಳುತ್ತಿರುವಾಗ ಕುಟುಂಬದ ಸದಸ್ಯರಿಗೆ ಮತ್ತು ಆತ್ಮೀಯರಿಗೆ ನನ್ನ ಆಳವಾದ ಸಂತಾಪ ಎಂದು ಟ್ವೀಟ್ ಮಾಡಿದ್ದಾರೆ.

- Advertisement -

Latest Posts

Don't Miss