Political News: ₹150 ಕೋಟಿ ಖರ್ಚು ಮಾಡಿ, ಸುಳ್ಳು ವರದಿ ಸಿದ್ಧಪಡಿಸಿದ್ದು ಯಾವ ಪುರುಷಾರ್ಥಕ್ಕೆ?: ನಿಖಿಲ್

Political News: ಜಾತಿ ಜನಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮರುಜನಗಣತಿಗೆ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ ಜತೆ ಚರ್ಚಿಸಿದ್ದು, ಮತ್ತೋಮ್ಮೆ ಜಾತಿ ಜನಗಣತಿ ಮಾಡಬೇಕು ಎಂದು ಸೂಚಿಸಲಾಾಗಿದೆ. ಕಾಂತರಾಜು ವರದಿಯನ್ನು ತಿರಸ್ಕರಿಸದೇ, ತಾತ್ವಿಕವಾಗಿ ಒಪ್ಪಿಗೆ ಸೂಚಿಸಲಾಗಿದೆ. ಇನ್ನು ಈ ಬಗ್ಗೆ ವ್ಯಂಗ್ಯವಾಡಿರುವ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ಸಾರ್ವಜನಿಕರ ತೆರಿಗೆ ಹಣಕ್ಕೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಮಾನ್ಯ ಮುಖ್ಯಮಂತ್ರಿಗಳೇ, ನೀವೇ ಸಿದ್ಧಪಡಿಸಿದ ಜಾತಿಗಣತಿ ವರದಿಯನ್ನು ನಿಮ್ಮ ಹೈಕಮಾಂಡ್ ಕಸದ ಬುಟ್ಟಿಗೆ ಏಸೆಯುವ ಮೂಲಕ, ಈ ವರದಿಯ ಅಂಕಿ- ಅಂಶಗಳು ಸತ್ಯಕ್ಕೆ ದೂರವಾಗಿವೆ ಎಂಬುದನ್ನು ಒಪ್ಪಿಕೊಂಡತಾಗಿದೆ. ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಜಾತಿ ಜಾತಿಗಳ ಮಧ್ಯೆ ಬೆಂಕಿ ಹಚ್ಚಿ ರಾಜಕೀಯ ಲಾಭ ಪಡೆಯಲು ಮಾಡಿದ ನಾಟಕಕ್ಕೆ ನಿಮ್ಮ ಹೈಕಮಾಂಡ್ ತಕ್ಕ ಶಾಸ್ತಿ ಮಾಡಿದೆ. ಸಾರ್ವಜನಿಕರ ತೆರಿಗೆ ಹಣಕ್ಕೆ ಬೆಲೆ ಇಲ್ಲವೇ ? ₹150 ಕೋಟಿ ರೂ ಖರ್ಚು ಮಾಡಿ, ಸುಳ್ಳು ವರದಿ ಸಿದ್ಧಪಡಿಸಿದ್ದು ಯಾವ ಪುರುಷಾರ್ಥಕ್ಕೆ? ಎಂದು ನಿಖಿಲ್ ಪ್ರಶ್ನಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಈಗಾಗಲೇ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಜೀ ನೇತೃತ್ವದ ಕೇಂದ್ರ ಸರ್ಕಾರ ಜನಗಣತಿ ಜೊತೆಗೆ ಜಾತಿಗಣತಿ ಮಾಡಲು ನಿರ್ಧರಿಸಿದೆ. ನಿಮ್ಮ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಜಾತಿಗಣತಿ ಮಾಡಿ ಸಾರ್ವಜನಿಕರ ತೆರಿಗೆ ಹಣವನ್ನು ವ್ಯರ್ಥ ಮಾಡುವುದು ಬೇಡ ಎಂದು ವಿನಂತಿಸುತ್ತೇನೆ ಎಂದು ನಿಖಿಲ ಎಕ್ಸ್ ಖಾತೆಯಲ್ಲಿ ಬರೆದುಕ“ಂಡಿದ್ದಾರೆ.
https://youtu.be/LlisZ8kPnYg

About The Author