- Advertisement -
Political News: ಕರ್ನಾಟಕದ ಮಾಜಿ ಸಿಎಂ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ(92) ಇಂದು ನಸುಕಿನ ಜಾವ ನಿಧನರಾಗಿದ್ದಾರೆ. ಕೆಲ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣ, ಇಂದು ಎಸ್.ಎಂ.ಕೃಷ್ಣ ನಿಧನರಾಗಿದ್ದಾರೆ.
ಬೆಂಗಳೂರಿನ ಸದಾಶಿವ ನಗರದಲ್ಲಿ ಇಂದು ನಸುಕಿನ ಜಾವ 2.30ಕ್ಕೆ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಎಸ್.ಎಂ.ಕೃಷ್ಣ ಬಳಲುತ್ತಿದ್ದರು. ಹೀಗಾಗಿ ಅವರನ್ನು ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಮುಂದುವರಿಸಲಾಗಿತ್ತು. ಐಸಿಯುನಲ್ಲಿರಿಸಿ, ಚಿಕಿತ್ಸೆ ಕೊಡಿಲಾದರೂ ಕೂಡ, ಚಿಕಿತ್ಸೆ ಫಲಿಸದೇ ಎಸ್.ಎಂ.ಕೃಷ್ಣ ನಿಧನರಾಗಿದ್ದಾರೆ.
- Advertisement -