Political News: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಂಸದೆ ಸುಮಲತಾ ಅಂಬರೀಷ್ ಆಕ್ರೋಶ

Political News: ಕೃಷ್ಣರಾಜಸಾಗರ ಅಣೆಕಟ್ಟಿನ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸಲು ಸರ್ಕಾರ ಮುಂದಾಗಿದ್ದು, ಈ ವಿರುದ್ಧ ಮಾಜಿ ಸಂಸದೆ ಸುಮಲತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಂಸದೆ ಸುಮಲತಾ, ಕೃಷ್ಣರಾಜಸಾಗರ ಅಣೆಕಟ್ಟಿನ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸುವುದನ್ನ ಮಂಡ್ಯದ ಜನತೆ ಹಾಗೂ ರೈತ ಸಂಘಗಳು ವಿರೋಧಿಸಿದ ಹೊರತಾಗಿಯು ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದಿರುವುದು ಖಂಡನೀಯ. ಇದು ಕೇವಲ ಒಂದು ಅಣೆಕಟ್ಟಲ್ಲ; ಅದು ನಮ್ಮ ಇತಿಹಾಸ, ಸಂಸ್ಕೃತಿ ಮತ್ತು ಮಂಡ್ಯದ ಜನತೆಯ ಜೀವನಾಡಿ. ಅದರ ಪಾವಿತ್ರ್ಯತೆ ಮತ್ತು ಪರಿಸರ ಸೂಕ್ಷ್ಮತೆಯನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದಿದ್ದಾರೆ.

ನಮ್ಮ ಮಂಡ್ಯದ ಅಭಿವೃದ್ಧಿಗೆ ಆದ್ಯತೆ ನೀಡುವ ಬದಲು ಇಂತಹ ದುಂದು ವೆಚ್ಚಕ್ಕೆ ಮುಂದಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಈ ಯೋಜನೆಯ ವಿರೋಧಕ್ಕೆ ನನ್ನ ಬೆಂಬಲ ಸೂಚಿಸುತ್ತಿದ್ದೇನೆ. ಶತಮಾನಗಳ ಇತಿಹಾಸವಿರುವ ಕನ್ನಂಬಾಡಿ ಕಟ್ಟೆಯ ಅಸ್ಥಿತ್ವಕ್ಕೆ ಧಕ್ಕೆ ತರುವ ಯಾವುದೇ ಯೋಜನೆಯನ್ನು ಜಾರಿಗೆ ತರಲು ಸ್ವಾಭಿಮಾನಿ ಮಂಡ್ಯದ ಜನತೆ ಅವಕಾಶ ಕೊಡಲಾರೆವು ಎಂದು ಸುಮಲತಾ ಅಂಬರೀಷ್ ಹೇಳಿದ್ದಾರೆ.

About The Author