Political News: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ (92) ನಿಧನ

Political News: ಭಾರತದ ಮಾಜಿ ಪ್ರಧಾನಿಯಾಗಿದ್ದಂಥ ಡಾ.ಮನಮೋಹನ್ ಸಿಂಗ್ (92) ನಿಧನರಾಗಿದ್ದಾರೆ. ಇಂದು ಸಂಜೆ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದಾರೆ. ಡಾ.ಸಿಂಗ್ ಅವರ ಪತ್ನಿ ಗುರುಚರಣ್ ಸಿಂಗ್, ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

1991ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ಮೂಲಕ ಮನಮೋಹನ್ ಸಿಂಗ್ ರಾಜಕೀಯ ಪ್ರವೇಶ ಮಾಡಿದ್ದರು.  2004ರಿಂದ 2014ರವರೆಗೆ ದೇಶದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಷ್ಟು ವರ್ಷ ಡಾ.ಸಿಂಗ್ ಭಾರತದ ಪ್ರಧಾನಿಯಾಗಿದ್ದರು.

ನಾಳೆ ಬೆಳಗಾವಿಯಲ್ಲಿ ಕಾಂಗ್ರೆಸ್ ಸಮಾವೇಶವಿತ್ತು. ಆದರೆ ಮನಮೋಹನ್ ಸಿಂಗ್ ನಿಧನರಾಗಿರುವ ಕಾರಣಕ್ಕೆ, ಕಾರ್ಯಕ್ರಮವನ್ನು ರದ್ದುಗೊಳಿಸಿ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಬೆಳಗಾವಿಯಿಂದ ದೆಹಲಿಗೆ ಹೊರಟಿದ್ದಾರೆ.

About The Author