Political News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಕೇಸ್‌ಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ನೀಡಿದ್ದು, ಸಿ.ಟಿ.ರವಿ ಅವರನ್ನು ರಿಲೀಸ್ ಮಾಡುವಂತೆ ಸೂಚನೆ ನೀಡಿದೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದ ವೇಳೆ, ಅಮಿತ್ ಶಾ ಅಂಬೇಡ್ಕರ್ ಬಗ್ಗೆ ಹೇಳಿದ ಹೇಳಿಕೆ ಖಂಡಿಸಿ, ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಇದಾದ ಬಳಿಕ, ಸಿ.ಟಿ.ರವಿ ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಲಕ್ಷ್ಮೀ ಹೆಬ್ಬಾಳ್ಕರ್ ನೀವೂ ಅಪಘಾತ ಮಾಡಿದ್ದೀರಿ. ಅಂದ ಮೇಲೆ ನೀವೂ ಕೊಲೆಗಡುಕರಾಗುತ್ತೀರಿ ಎಂದು ಹೇಳಿದ್ದರು.
ಇದಕ್ಕೆ ಸಿ.ಟಿ.ರವಿ ಹೆಬ್ಬಳಾಕರ್ ಅವರನ್ನು ಪ್ರಾಸ್ಟಿಟ್ಯೂಟ್ ಎಂದರು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದ್ದರು. ಬಳಿಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿ, ರವಿ ಅವರನ್ನು ಬಂಧಿಸಲಾಗಿತ್ತು. ಹಲವು ಹೈ ಡ್ರಾಮಾ ನಡೆದ ಬಳಿಕ ಇಂದು ಸಂಜೆ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿದ್ದು, ವಿಚಾರಣೆ ಬಳಿಕ, ಕೋರ್ಟ್ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡುವಂತೆ ಆದೇಶ ನೀಡಿದೆ.