Political News: ಬಿಜೆಪಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ರೈತರ ಕಷ್ಟವನ್ನು ಕೇಳುವುದು ಬಿಟ್ಟು ರಾಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕುರ್ಚಿ ಕಿತ್ತಾಟದಲ್ಲಿ ರೈತರನ್ನು ಸಂಪೂರ್ಣವಾಗಿ ಮರೆತಿರುವ ಸರ್ಕಾರ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಗಳ ಕಬ್ಬು ಬೆಳೆಗಾರರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದರೂ ಕ್ಯಾರೆ ಎನ್ನುತ್ತಿಲ್ಲ. ಒಂದು ಕಡೆ ಹೆಸರು, ಸೂರ್ಯಕಾಂತಿ, ಉದ್ದಿನ ಕಾಳು, ಸೋಯಾಬೀನ್ ಬೆಳೆದ ರೈತರು ತಮ್ಮ ಫಸಲು ಮಾರಲಾಗದೆ ಸಂಕಷ್ಟದಲ್ಲಿದ್ದರೆ, ಮತ್ತೊಂದು ಕಡೆ ಕಬ್ಬು ಬೆಳೆಗಾರರು ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ.
ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ಅಲಗಾಡುತ್ತಿರುವ ಕುರ್ಚಿಯಿಂದ ಹತಾಶರಾಗಿರುವ ತಾವು ತಾಳ್ಮೆ ಕಳೆದುಕೊಂಡು ಎಲ್ಲರ ಮೇಲೂ ಸಿಡಿಮಿಡಿ ಎನ್ನುತ್ತಿದ್ದೀರಿ. ನಾಯಕತ್ವ ಬದಲಾವಣೆ ಗೊಂದಲದಿಂದ ಸಚಿವರು, ಶಾಸಕರು ದಿಕ್ಕು ತೋಚದೆ ಹೈರಾಣಾಗಿ ಮನೆಯಿಂದ ಆಚೆ ಬರುತ್ತಿಲ್ಲ. ಇನ್ನು ರೈತರು ತಮ್ಮ ಸಂಕಷ್ಟ ಯಾರ ಬಳಿ ಹೇಳಿಕೊಳ್ಳಬೇಕು ಸ್ವಾಮಿ? ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸದ ಈ ರೈತವಿರೋಧಿ ಕಾಂಗ್ರೆಸ್ ಸರ್ಕಾರ ಇದ್ದರೆಷ್ಟು, ಹೋದರೆಷ್ಟು. ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ.
ಈ ರೀತಿಯಾಗಿ ಸೋಶಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

