Political News: ಗುಟ್ಕಾ, ಪಾನ್‌ ಮಸಾಲಾದಲ್ಲಿ ಡ್ರಗ್ ಪತ್ತೆಯಾದ್ರೆ, ಬ್ಯಾನ್: ಸಿಎಂ ಡಿ.ಕೆ.ಶಿವಕುಮಾರ್

Political News: ಸಿಎಂ ಡಿ.ಕೆ.ಶಿವಕುಮಾರ್ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನ ಹಾಗೂ ‘ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ’ದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ‘ನಶಾ ಮುಕ್ತ ಭಾರತ ಅಭಿಯಾನ’ದಲ್ಲಿ ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಅವರು, ಪಾನ್ ಮಸಾಲಾ, ಗುಟ್ಕಾ ಹಾಗೂ ಅಡಿಕೆ ಪದಾರ್ಥಗಳಲ್ಲಿ ಸ್ವಲ್ಪ ಅಮಲು ಪದಾರ್ಥಗಳನ್ನು ಬೆರೆಸಿ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಇದು ತಕ್ಷಣವೇ ನಿಲ್ಲದಿದ್ದರೆ ರಾಜ್ಯದಲ್ಲಿ ಎಲ್ಲಾ ರೀತಿಯ ಪಾನ್ ಮಸಾಲಾ ಹಾಗೂ ಗುಟ್ಕಾಗಳನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವ್ಯಸನಮುಕ್ತ ನಾಳಿನ ಸುಂದರ ಕನಸನ್ನು ನನಸಾಗಿಸಲು ಶಿಕ್ಷಣ ಸಂಸ್ಥೆಗಳು, ಪೋಷಕರು ಮತ್ತು ನಾಗರಿಕರು ಒಟ್ಟಾಗಿ ಮುನ್ನಡೆಯಬೇಕಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ಗೆ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಶ್ರೀ ಸಿ. ಪಿ. ರಾಧಾಕೃಷ್ಣನ್, ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಮತ್ತು ಆಂಧ್ರಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಎಸ್. ಅಬ್ದುಲ್ ನಜೀರ್ ಸಾಥ್ ನೀಡಿದರು.

About The Author