Friday, July 4, 2025

Latest Posts

Political News: ಸಿದ್ದರಾಮಯ್ಯರನ್ನು ಲಾಟರಿ ಸಿಎಂ ಎಂದು ಲೇವಡಿ ಮಾಡಿದ ಜೆಡಿಎಸ್

- Advertisement -

Political News: ಸಿಎಂ ಸಿದ್ದರಾಮಯ್ಯ ಕಳೆದೆರಡು ದಿನಗಳಿಂದ ನಾನೇ ಸಿಎಂ ಎಂದು ಹೇಳಿಕೆ ನೀಡುತ್ತಿದ್ದು, ಈ ಬಗ್ಗೆ ಜೆಡಿಎಸ್ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.

ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ತಿರುಗುವ ಕರ್ಮ ಸಿದ್ದರಾಮಯ್ಯ ಅವರಿಗೆ ಬರಬಾರದಿತ್ತು. ನಾನೇ ಸಿಎಂ.. ನಾನೇ ಸಿಎಂ.. ಎಂದು ಮಾಧ್ಯಮಗಳ ಮುಂದೆ ಗಂಟಲು ಹರಿದು ಕೊಳ್ಳುತ್ತಿರುವುದರ ಹಿಂದೆ ಸಿಎಂ ಕುರ್ಚಿ ಅಲುಗಾಡುತ್ತಿರುವುದನ್ನು ಸೂಚಿಸುತ್ತಿದೆ. ನಾಯಕತ್ವ ಬದಲಾವಣೆ ಆಗಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಣದ ಇಕ್ಬಾಲ್ ಹುಸೇನ್, ಹೆಚ್.ಸಿ ಬಾಲಕೃಷ್ಣ, ರಂಗನಾಥ್, ರವಿ ಗಾಣಿಗ ಸೇರಿದಂತೆ ಹಲವರು ಬಹಿರಂಗವಾಗಿ ಹೇಳಿಕೆ ಕೊಡುತ್ತಿದ್ದಾರೆ ಎಂದು ಜೆಡಿಎಸ್ ವ್ಯಂಗ್ಯವಾಡಿದ್ದಾರೆ.

ಇನ್ನು ತಮ್ಮ ನಾಯಕನ ಕುರ್ಚಿಗೆ ಕುತ್ತು ಬಂದಿರುವುದು ಸ್ಪಷ್ಟವಾಗುತ್ತಲೇ ಸಿದ್ದರಾಮಯ್ಯ ಆಪ್ತರು ಸಹ ಕೂಗುಮಾರಿಗಳಂತೆ ಅವರ ಪರ ಬ್ಯಾಟ್ ಬೀಸುತ್ತಿದ್ದಾರೆ. “ಲಾಟರಿ ಸಿಎಂ” ಸಿದ್ದರಾಮಯ್ಯ ಅವರೇ, ನಿಮ್ಮ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಮತ್ತು ನಿಮ್ಮ ನಾಯಕತ್ವದ ಬಗ್ಗೆ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನದ ಬೆಂಕಿ ಎದ್ದು, ಹಾದಿ ಬೀದಿಯಲ್ಲಿ ಹೊಗೆಯಾಡುತ್ತಿದೆ. ವಿಪಕ್ಷಗಳ ವಿರುದ್ಧ ಬೆಂಕಿಯುಗುಳಿದರೇ, ನಿಮ್ಮ ಹೊಟ್ಟೆ ಕಿಚ್ಚು ಮತ್ತಷ್ಟು ಉಲ್ಬಣಿಸುತ್ತದೆ ಹೊರತು ಉಪಶಮನವಾಗುವುದಿಲ್ಲ ಎಂದು ಜೆಡಿಎಸ್ ಹೀಯಾಳಿಸಿದೆ.

ರಾಜ್ಯದಲ್ಲಿ ಗುಲಾಮಿ ಕಾಂಗ್ರೆಸ್ ಸರ್ಕಾರದ ತೊಘಲಕ್‌ ಆಡಳಿತ ಹೇಗಿದೆ ನೋಡಿ ಕರ್ನಾಟಕದ ಮಹಾಜನತೆ ! ರಾಮನ ಹೆಸರಿನ “ರಾಮನಗರ” ಜಿಲ್ಲೆಯನ್ನು “ಬೆಂಗಳೂರು ದಕ್ಷಿಣ” ಎಂದು ವಿರೋಧವನ್ನು ಲೆಕ್ಕಿಸದೇ ಮರುನಾಮಕರಣ ಮಾಡಲಾಗಿದೆ. “ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ”ಕ್ಕೆ ಮಾಜಿ ಪಿಎಂ “ಮನಮೋಹನ್‌ ಸಿಂಗ್‌ ವಿವಿ ಬೆಂಗಳೂರು” ಎಂದು ಹೆಸರಿಡಲು ಈಗ ಕಾಂಗ್ರೆಸ್‌ ಸರ್ಕಾರ ತೀರ್ಮಾನಿಸಿದೆ.

ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ನಗರದ ವಿಶ್ವಮಟ್ಟದಲ್ಲಿ ಬ್ರ್ಯಾಂಡ್‌ ಆಗಿದೆ. “ಬೆಂಗಳೂರು” ಹೆಸರನ್ನೇ ವಿಶ್ವವಿದ್ಯಾಲಯಕ್ಕೂ ಇಡಲಾಗಿತ್ತು. ಪರ್ಯಾಯಾವಾಗಿ ಮರುನಾಮಕರಣ ಮಾಡುವ ಅವಶ್ಯಕತೆ, ಜರೂರು ಏನಿತ್ತು ? ಅಧಿಕಾರದ ಮದ, ದರ್ಪ, ದುರಹಂಕಾರದಲ್ಲಿ ಮೆರೆಯುತ್ತಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ , ಹೈಕಮಾಂಡ್‌ ಮೆಚ್ಚಿಸಲು ಬೆಂಗಳೂರಿನ ಘನತೆ, ಗೌರವಕ್ಕೆ ಹಾಗೂ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ವಿರೋಧದ ನಡುವೆಯೂ ಮಾಡುತ್ತಿರುವುದು ಅಕ್ಷಮ್ಯ ಎಂದು ರಾಜ್ಯ ಸರ್ಕಾರದ ನಡೆಯನ್ನು ಜೆಡಿಎಸ್ ವಿರೋಧಿಸಿದೆ.

- Advertisement -

Latest Posts

Don't Miss