Political News: ನವದೆಹಲಿ: ಮಹಾರಾಷ್ಟ್ರದಲ್ಲಿ ಹೊಸ ಮತದಾರರ ಸೇರ್ಪಡೆ ಪರಾದರ್ಶಕವಾಗಿಯೇ ಇದೆ. ಈ ವಿಚಾರದಲ್ಲಿ ಕಾಂಗ್ರೆಸ್ ಡ್ರಾಮಾ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು ನೀಡಿದ್ದಾರೆ. (Prahlad Joshi)
ಎಐಸಿಸಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ನಾಯಕರೂ ಆಗಿರುವ ಮಲ್ಲಿಕಾರ್ಜುನ್ ಖರ್ಗೆ ಅವರು ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಜೋಶಿ ಪ್ರತಿಕ್ರಿಯಿಸಿದ್ದಾರೆ. (Mallikarjuna Kharge)
ಮಹಾರಾಷ್ಟ್ರ ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಲಕ್ಷಾಂತರ ಮತದಾರರ ಹೆಸರು ಸೇರ್ಪಡೆಯಾಗಿದೆ ಎಂಬ ಖರ್ಗೆ ಅವರ ಹೇಳಿಕೆಗೆ ಸಚಿವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಖರ್ಗೆಜಿಯವರ ಆರೋಪಗಳು ಆಧಾರರಹಿತವಾಗಿದ್ದು, ಕಾಂಗ್ರೆಸ್ ಪಕ್ಷದ ಅನಗತ್ಯ ದ್ರಣವನ್ನು ಪ್ರಚೋದಿಸುವ ಪ್ರಯತ್ನ ಮಾಡುತ್ತಿದ್ದಾರೆ ಅಷ್ಟೇ ಎಂದು ಸಚಿವ ಜೋಶಿ ತಿರುಗೇಟು ನೀಡಿದ್ದಾರೆ.
ಯಾವುದೂ ಆಕ್ರಮವಾಗಿಲ್ಲ:
ಮಹಾರಾಷ್ಟ್ರದಲ್ಲಿ 26.46 ಲಕ್ಷ ಯುವ ಮತದಾರರು ಸೇರಿದಂತೆ 40.81 ಲಕ್ಷ ಮತದಾರರನ್ನು ಚುನಾವಣಾ ಆಯೋಗವು ಪಾರದರ್ಶಕವಾಗಿಯೇ ಸೇರಿಸಿದೆ. ಇದರಲ್ಲಿ ಯಾವುದೇ ರೀತಿಯ ಅಸಹಜ, ಅಕ್ರಮ ಪ್ರಕ್ರಿಯೆ ನಡೆದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಕೇಳಿದ್ದನ್ನೇ ಕೇಳುತ್ತಿದೆ ಕಾಂಗ್ರೆಸ್: ಚುನಾವಣಾ ಪ್ರಕ್ರಿಯೆಯ ಭಾಗವಾಗಿ ಚುನಾವಣಾ ಆಯೋಗ ಆಗಲೇ, ಅಂದರೆ ಚುನಾವಣೆಗೆ ಮುನ್ನವೇ ಡೇಟಾವನ್ನು ಒದಗಿಸಿದೆ. ಆದರೆ, ಕಾಂಗ್ರೆಸ್ಸಿಗರು ಈಗ ವಿನಾಕಾರಣ ಸಮಸ್ಯೆ ಸೃಷ್ಟಿಸಲು ಮತ್ತೆ ಮತ್ತೆ ಕೇಳಿದ್ದನ್ನೇ ಕೇಳುತ್ತಿದ್ದಾರೆ ಎಂದು ಸಚಿವ ಪ್ರಲ್ಹಾದ ಜೋಶಿ ಅವರು ತಮ್ಮ X ಖಾತೆಯಲ್ಲಿ ತಿಳಿಸಿದ್ದಾರೆ.