Political News: ವಕೀಲರ ಸಭಾಂಗಣ ಶಂಕುಸ್ಥಾಪನೆ ಮಾಡಿದ ಸಚಿವ ಚಲುವರಾಯಸ್ವಾಮಿ

Mandya Political News: ಮಂಡ್ಯ ನಗರದ ವಕೀಲರ ಸಂಘದ ಆವರಣದಲ್ಲಿ ಜಿಲ್ಲಾ ವಕೀಲರ ಸಂಘದ ವತಿಯಿಂದ ವಕೀಲರ ತೆರೆದ ಸಭಾಂಗಣದ ಶಂಕುಸ್ಥಾಪನ ಕಾರ್ಯಕ್ರಮ ಜರುಗಿತು. ಸಭಾಂಗಣದ ಶಂಕುಸ್ಥಾಪನೆ ಹಾಗೂ ಶಿಲಾನ್ಯಾಸವನ್ನು ಕರ್ನಾಟಕ ಸರ್ಕಾರ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಏನ್. ಚಲುವರಾಯಸ್ವಾಮಿ ರವರು ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಂ ಟಿ ರಾಜೇಂದ್ರ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಮಧು.ಜಿ.ಮಾದೇಗೌಡ, ಕರ್ನಾಟಕ ರಾಜ್ಯ ವಕೀಲರ ಪರಿಷತ್ ಅಧ್ಯಕ್ಷರಾದ ಎಚ್.ಏಲ್.ವಿಶಾಲ್ ರಘು, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಉಪಾಧ್ಯಕ್ಷರಾದ ಕೆ.ಎಲ್.ಮರಿಸ್ವಾಮಿ, ಖಜಾಂಚಿ ಡಿ. ಎಂ. ಮಹೇಶ್ ಹಾಗೂ ಸಂಘದ ಕಾರ್ಯಕಾರಿ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು ನೀಡಲು ಸಂಪರ್ಕಿಸಿ

9113549531

About The Author