Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ ದಿನ ಕೋಮಾದಲ್ಲಿದ್ದರು. ಇದೀಗ ಚಿಕಿತ್ಸೆ ಫಲಿಸದೇ. ಬೆಳಗ್ಗಿನ ಜಾವ ಸುಮಾರು 3 ಗಂಟೆಗೆ ಸುಧಾಕರ್ ಇಹಲೋಕ ತ್ಯಜಿಸಿದ್ದಾರೆ.
ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ.ಸುಧಾಕರ್, ಪತ್ನಿ ಹರ್ಷಿಣಿ, ಪುತ್ರ ಸುಹಾಸ್ ಮತ್ತು ಪುತ್ರಿ ಸ್ಪೂರ್ತಿ ಸೇರಿ ಹಲವು ಅಭಿಮಾನಿಗಳನ್ನು ಅಗಲಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದವರಾದ ಸುಧಾಕರ್ ಅವರ ಅಂತಿಮ ದರ್ಶನಕ್ಕೆ ಅವಕಾಶವಿದ್ದು, ಡಿ.ಸುಧಾಕರ್ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆ ಮಾಡಲಾಗುತ್ತಿದೆ.
ಸುಧಾಕರ್ ನಿಧನಕ್ಕೆ ಸಿಎಂ ಸಿದ್ದರಾಮಯಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದಾರೆ.
ನಮ್ಮ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯ ನಾಯಕರು ಆಗಿದ್ದ ಡಿ.ಸುಧಾಕರ್ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ನಾನು ಖುದ್ದು ಆಸ್ಪತ್ರೆಗೆ ಭೇಟಿನೀಡಿ ಸುಧಾಕರ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಂದ… pic.twitter.com/2OO7VvWLrs
— Siddaramaiah (@siddaramaiah) May 10, 2026
ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ನಮ್ಮ ಸಂಪುಟ ಸಹೋದ್ಯೋಗಿ, ನನ್ನ ಆತ್ಮೀಯ ಸ್ನೇಹಿತ ಡಿ. ಸುಧಾಕರ್ ಅವರು ಇಂದು ಕೊನೆಯುಸಿರೆಳೆದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ.
ಹಿರಿಯೂರು ಶಾಸಕರು, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ ಅವರು ಜನಪರ ಕಾಳಜಿಯುಳ್ಳ… pic.twitter.com/GFngq5BAYt
— DK Shivakumar (@DKShivakumar) May 10, 2026




