Tuesday, October 15, 2024

Latest Posts

Political news: ನೂತನ ಪುಡ್ ಪಾರ್ಕ್ ಸ್ಥಾಪನೆಗೆ ಸೂಚನೆ ನೀಡಿದ ಸಚಿವ ಎನ್.ಚಲುವರಾಯಸ್ವಾಮಿ

- Advertisement -

Political News: ಬಜೆಟ್ ನಲ್ಲಿ ಘೋಷಿಸಿರುವಂತೆ ವಿಜಾಪುರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ನೂತನ ಪುಡ್ ಪಾರ್ಕ್ ಗಳನ್ನು ಪ್ರಾರಂಭಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಸೂಚಿಸಿದ್ದಾರೆ.

ವಿಕಾಸ ಸೌಧದ ಸಭಾ ಕೊಠಡಿಯಲ್ಲಿಂದು ಆಹಾರ ಕರ್ನಾಟಕ ನಿಯಮಿತದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರ್ಥಿಕ ಇಲಾಖೆ ಮೂಲಕ ಡಿ.ಪಿ ಆರ್ ಗೆ ಅನುಮೋದನೆ ಪಡೆದು ಕೆಲಸ ಪ್ರಾರಂಭಿಸುವಂತೆ ಅವರು ನಿರ್ದೇಶನ ನೀಡಿದರು.

ರಾಜ್ಯದಲ್ಲಿ ಆಹಾರ ಉತ್ಪನ್ನಗಳ ಸಂಸ್ಕರಣಾ ಘಟಕಗಳನ್ನು ಹೆಚ್ಚಿಸಿ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರು ತಿಳಿಸಿದರು.

ಕೃಷಿ ಇಲಾಖೆ ಆಯುಕ್ತರಾದ ವಿ.ಅನ್ಬುಕುಮಾರ್ , ಆಹಾರ ಸಂಸ್ಕರಣೆ ಮತ್ತು ಕಟಾವು ತಂತ್ರಜ್ಞಾನದ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಆಹಾರ ಕರ್ನಾಟಕ ನಿ ದ ವ್ಯವಸ್ಥಾಪಕ‌ ನಿರ್ದೇಶಕರಾದ ಇರ್ಫಾನ್ ,ಕೃಷಿ ನಿರ್ದೇಶಕರಾದ ಡಾ ಜಿ‌ ಟಿ ಪುತ್ರ ಮತ್ತಿತರರು ಉಪಸ್ಥಿತರಿದ್ದರು.

- Advertisement -

Latest Posts

Don't Miss