Political News: ಹುಬ್ಬಳ್ಳಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಚಾಲನೆ ನೀಡಿದ ಶಾಸಕ ಮಹೇಶ್ ಟೆಂಗಿನಕಾಯಿ

Hubli News: ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಚಾಲನೆ ದೊರೆತಿದ್ದು, ಹುಬ್ಬಳ್ಳಿಯಲ್ಲೂ ಅಭಿಯಾನ ಆರಂಭವಾಗಿದೆ. ಶಾಸಕ ಮಹೇಶ್ ಟೆಂಗಿನಕಾಯಿ ಅವರ ನಿವಾಸದಲ್ಲಿ ಮತದಾರರ ನೋಂದಣಿ ಪ್ರಕ್ರಿಯೆಗೆ ಅಧಿಕಾರಿಗಳು ಚಾಲನೆ ನೀಡಿದರು.

ಹುಬ್ಬಳ್ಳಿ ನಗರದ ಶಾಸಕ ಮಹೇಶ್ ಟೆಂಗಿನಕಾಯಿ ಅವರ ನಿವಾಸಕ್ಕೆ ಭೇಟಿ ನೀಡಿದ ಚುನಾವಣಾ ಸಿಬ್ಬಂದಿ, ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)ಗೆ ಸಂಬಂಧಿಸಿದ ಎನ್ಯೂಮರೇಷನ್ ಫಾರ್ಮ್‌ನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾಧಿಕಾರಿ ಆರ್. ಸ್ನೇಹಲ್ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ ಉಪಸ್ಥಿತರಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಕುರಿತು ಮಾಹಿತಿ ನೀಡಿದರು.

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಇತರೆ ಮಾಹಿತಿಗಳನ್ನು ನಿಖರವಾಗಿ ಭರ್ತಿ ಮಾಡಿ ಚುನಾವಣಾ ಸಿಬ್ಬಂದಿಗೆ ಸಲ್ಲಿಸುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಮತದಾರರ ಪಟ್ಟಿಯನ್ನು ದೋಷರಹಿತಗೊಳಿಸುವ ಉದ್ದೇಶದಿಂದ ಆರಂಭಿಸಿರುವ ಈ ವಿಶೇಷ ಅಭಿಯಾನದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿ ಚುನಾವಣಾ ಇಲಾಖೆಯೊಂದಿಗೆ ಸಹಕರಿಸುವಂತೆ ಅಧಿಕಾರಿಗಳು ಕರೆ ನೀಡಿದರು.

About The Author