Political News: ವಾಲ್ಮಿಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ಮೇಲೆ ಸದ್ಯ ತನಿಖೆ ನಡೆಯುತ್ತಿದೆ. ಅಲ್ಲದೇ, ಆ ಪ್ರಕರಣ ಸಾಬೀತಾಗುವ ಎಲ್ಲ ಸಾಧ್ಯತೆಗಳೂ ಇದೆ. ಆದರೂ ನಾಗೇಂದ್ರ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಿರುವುದರ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಈ ಬಗ್ಗೆ ಕಿಡಿಕಾರಿದ್ದು ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಪ್ರೆಸ್ಮೀಟ್ ನಡೆಸಿ ಮಾತನಾಡಿರುವ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅಕ್ರಮದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
SIT ತಾವೇ ರಚಿಸಿ, ತಾವೇ ‘ಕ್ಲೀನ್ ಚಿಟ್’ ನೀಡಿದರೆ ಅದನ್ನು ಹೇಗೆ ಒಪ್ಪಲು ಸಾಧ್ಯ? ED, IT ತನಿಖೆಗಳಿಂದಲೂ ಅಂತಿಮವಾಗಿ ಕ್ಲೀನ್ ಚಿಟ್ ಸಿಕ್ಕಿದೆಯೇ? ಪ್ರಕರಣ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವಾಗ, ನ್ಯಾಯಾಲಯದಲ್ಲಿ ನಿರಪರಾಧಿ ಎಂದು ಸಾಬೀತಾಗಲಿ; ಬಳಿಕ ಅವರು ಸಚಿವರಾಗುವುದಕ್ಕೆ ನಮ್ಮ ವಿರೋಧವಿಲ್ಲ. ಜನರ ಹಣದ ಲೂಟಿಗೆ ರಕ್ಷಣೆ ಬೇಡ. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ನಮ್ಮ ನಿಲುವು ಸ್ಪಷ್ಟ ಎಂದು ಆರ್.ಅಶೋಕ್ ಹೇಳಿದ್ದಾರೆ.
