Political News: ವಿಧಾನಸಭೆಯಲ್ಲಿಂದು ಬಜೆಟ್ ಕುರಿತು ಪ್ರಶ್ನೋತ್ತರ ಚರ್ಚೆ ನಡೆದಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಯಾವುದೇ ರಾಜ್ಯ ಅಥವಾ ದೇಶವಾಗಲಿ ಸಾಲ ಮಾಡದಿರಲು ಸಾಧ್ಯವಿಲ್ಲ, ಸಮಾಜ ಕಲ್ಯಾಣ ಹಾಗೂ ಅಭಿವೃದ್ಧಿಗಾಗಿ ಸಾಲ ಮಾಡಬೇಕು. ಸರ್ಕಾರ ಸಾಲವನ್ನು ನಿಯಮದ ಮಿತಿಯೊಳಗೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
2008 ರಿಂದ 2013 ರವರೆಗೆ ಇದ್ದ ಬಿಜೆಪಿಯೂ ಸಾಲ ಮಾಡಿದೆ. ಐದು ವರ್ಷಕ್ಕೊಮ್ಮೆ ಸಾಲ ದುಪ್ಪಟ್ಟು ಆಗುತ್ತದೆ. ಮೋದಿಯವರು ಪ್ರಧಾನಿಯಾದ ನಂತರ ₹165 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಜಿಡಿಪಿ ಬೆಳವಣಿಗೆಯಲ್ಲಿ ರಾಜ್ಯಕ್ಕಿಂತ ದೇಶ ಕಡಿಮೆ ಇದೆ. ಡೆಕ್ಕನ್ ಹೆರಾಲ್ಡ್ ಪತ್ರಿಕೆಯಲ್ಲಿನ ವರದಿಯಲ್ಲಿ , ದಕ್ಷಿಣ ಭಾರತದ ರಾಜ್ಯಗಳು ದೇಶದ ಜಿಡಿಪಿಗೆ ಹೆಚ್ಚಿನ ಕೊಡುಗೆ ನೀಡುತ್ತಿದ್ದು, ಅದರಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗ್ಯಾರಂಟಿಗಳಿಂದ ಸಾಲ ಹೆಚ್ಚಿದೆ ಎಂದು ಟೀಕಿಸಲಾಗಿದೆ. ಇದುವರೆಗೆ ₹1.31 ಲಕ್ಷ ಕೋಟಿ ಗ್ಯಾರಂಟಿಗಳಿಗೆ ವೆಚ್ಚ ಮಾಡಲಾಗಿದೆ. ಮಹಾರಾಷ್ಟ್ರ ಸರ್ಕಾರ, ಜನಕಲ್ಯಾಣ ಯೋಜನೆಗಳಿಗೆ ವರ್ಷದಿಂದ ವರ್ಷಕ್ಕೆ ಅನುದಾನ ಕಡಿಮೆ ಮಾಡಿದೆ. ಆದರೆ ನಮ್ಮ ಸರ್ಕಾರ ಗ್ಯಾರಂಟಿಗಳಿಗೆ ಪ್ರತಿ ವರ್ಷ ಒಂದೇ ರೀತಿಯಲ್ಲಿ ಅನುದಾನ ನೀಡಿದ್ದೇವೆ ಎಂದು ಸಿಎಂ ಹೇಳಿದರು.
ರಾಜ್ಯದ ಜಿಎಸ್ಟಿಯಲ್ಲಿ 10% ಬೆಳವಣಿಗೆಯಿತ್ತು, ಆದರೆ ಕೇಂದ್ರ ಸರ್ಕಾರ, ಜಿಎಸ್ಟಿ ದರವನ್ನು ಕಡಿತಗೊಳಿಸಿದ್ದರಿಂದ, ಜಿಎಸ್ಟಿ ಬೆಳವಣಿಗೆ 4% ಗೆ ಕುಸಿಯಿತು. ದೇಶದ ಏಳು ರಾಜ್ಯಗಳು ಕೇಂದ್ರದ ಈ ನೀತಿಯನ್ನು ವಿರೋಧಿಸಿ, ಪರಿಹಾರ ಕೇಳಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಾಲದ ಮೇಲೆ ಸರ್ಕಾರ ನಡೆಯುತ್ತಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು.
ಯಾವುದೇ ರಾಜ್ಯ ಅಥವಾ ದೇಶವಾಗಲಿ ಸಾಲ ಮಾಡದಿರಲು ಸಾಧ್ಯವಿಲ್ಲ, ಸಮಾಜ ಕಲ್ಯಾಣ ಹಾಗೂ ಅಭಿವೃದ್ಧಿಗಾಗಿ ಸಾಲ ಮಾಡಬೇಕು. ಸರ್ಕಾರ ಸಾಲವನ್ನು ನಿಯಮದ ಮಿತಿಯೊಳಗೆ ಮಾಡಲಾಗಿದೆ.
2008 ರಿಂದ 2013 ರವರೆಗೆ ಇದ್ದ ಬಿಜೆಪಿಯೂ ಸಾಲ ಮಾಡಿದೆ. ಐದು ವರ್ಷಕ್ಕೊಮ್ಮೆ ಸಾಲ… pic.twitter.com/wAVEVy2JVN
— Siddaramaiah (@siddaramaiah) March 25, 2026




