Saturday, July 12, 2025

Latest Posts

Political News: ಪ್ರತಾಪ್ ಸಿಂಹ ಓರ್ವ ಔಟ್‌ಡೇಟೆಡ್ ವ್ಯಕ್ತಿ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

- Advertisement -

Political News: ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ ಬ್ಯಾನ್ ಮಾಡುತ್ತೇವೆ ಎಂಬ ಹೇಳಿಕೆ ಸಖತ್ ಸದ್ದು ಮಾಡಿದ್ದು, ವಿಪಕ್ಷ ನಾಯಕರು ಈ ಬಗ್ಗೆ ತರಹೇವಾರಿ ಹೇಳಿಕೆ ನೀಡುತ್ತಿದ್ದಾರೆ.

ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ಕೂಡ ಈ ಬಗ್ಗೆ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾದ್ರೂ ಪ್ರಿಯಾಂಕ್ ಖರ್ಗೆಯವರು ತಮ್ಮ ಇಲಾಖೆ ಬಗ್ಗೆ ಮಾತನಾಡಿಯೇ ಇಲ್ಲ. ತಾವು ಮಾಡಿದ ಸಾಧನೆ ಬಗ್ಗೆ ಹೇಳಿಕ“ಂಡಿಲ್ಲ. ಆದರೆ ಮಾಧ್ಯಮದವರು ಸಿಕ್ಕಾಗ ಬಿಜೆಪಿಯವರಿಗೆ ಬೈಯ್ಯುವಂಥದ್ದು, ಅಂಬೇಡ್ಕರ್ ಹೆಸರನ್ನು ಹೇಳಿಕ“ಂಡು, ಬಿಜೆಪಿಯನ್ನು ಹೀಗೆಳೆಯುವಂಥ ಕೆಲಸ ಮಾಡುತ್ತಿದ್ದಾರೆ. ಆರ್‌ಎಸ್‌ಎಸ್‌ ಬಗ್ಗೆ ಅವಾಚ್ಯವಾಗಿ ಮಾತನಾಡುವುದು ಬಿಟ್ರೆ ಅವರೇನು ಮಾಡಿಲ್ಲವೆಂದು ನಿನ್ನೆ ಪ್ರತಾಪ್ ಸಿಂಹ ಪ್ರಿಯಾಂಕ್ ಖರ್ಗೆ ಬಗ್ಗೆ ವಾಗ್ದಾಳಿ ನಡೆಸಿದ್ದರು.

ಇಂದು ಪ್ರಿಯಾಂಕ್ ಖರ್ಗೆ ಈ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಔಟ್ ಡೇಟೆಡ್ ವಸ್ತುಗಳಿಗೆ ಮಾರುಕಟ್ಟೆಯಲ್ಲಿ ಬೆಲೆ ಇರುವುದಿಲ್ಲ. ಸ್ವತಃ ಬಿಜೆಪಿಯಿಂದಲೇ ತಿರಸ್ಕೃತಗೊಂಡು ಬೆಲೆ ಕಳೆದುಕೊಂಡಿರುವ ಪ್ರತಾಪ್ ಸಿಂಹ ಎಂಬ ಔಟ್ ಡೇಟೆಡ್ ವ್ಯಕ್ತಿ ನನ್ನ ಬಗ್ಗೆ ಮಾತನಾಡುವ ಮೂಲಕ ಮಾರ್ಕೆಟ್ ಕುದುರಿಸಿಕೊಳ್ಳುವ ತವಕದಲ್ಲಿದ್ದಾರೆ. ವಿಜಯೇಂದ್ರ ಹಠವೋ ಬಣದಲ್ಲಿರುವ ಪ್ರತಾಪ್ ಸಿಂಹ ಮೊದಲು ತಮ್ಮ ಅಭಿಯಾನದಲ್ಲಿ ಯಶಸ್ವಿಯಾಗಿ, ತಮ್ಮ ಸಾಮರ್ಥ್ಯ ನಿರೂಪಿಸಿದ ನಂತರ ನನ್ನ ಬಗ್ಗೆ ಗಮನ ಕೊಡಲಿ. ಪ್ರತಾಪ್ ಸಿಂಹ ಅವರೇ, ಬಿಜೆಪಿ ಪಕ್ಷ ನಿಮಗೆ ಟಿಕೆಟ್ ನೀಡದೆ ಮೂಲೆಗೆ ತಳ್ಳಿದ್ದೇಕೆ? ಎಂದು ಪ್ರಿಯಾಂಕ್ ಪ್ರಶ್ನಿಸಿದ್ದಾರೆ.

ಸಾಮರ್ಥ್ಯವಿಲ್ಲದ್ದಕ್ಕಾ? ಟಿಕೆಟ್ ಅಷ್ಟೇ ಅಲ್ಲ, ಪಕ್ಷದಲ್ಲೂ ಯಾವುದೇ ಪ್ರಮುಖ ಹುದ್ದೆ ನೀಡದೆ ನಿರ್ಲಕ್ಷಿಸಿರುವುದೇಕೆ? ಅರ್ಹತೆ ಇಲ್ಲದ್ದಕ್ಕಾ? ನರಿಗಳು ಸಿಂಹ ಅಂತ ಹೆಸರಿಟ್ಟುಕೊಂಡ ಮಾತ್ರಕ್ಕೆ ಸಿಂಹ ಆಗಲು ಸಾಧ್ಯವಿಲ್ಲ. ನನ್ನ ಬಗ್ಗೆ ಮಾತನಾಡಲು ಗಂಭೀರ ವಿಷಯಗಳಿಲ್ಲದೆ ನನ್ನ ಹೆಸರಿನ ಬಗ್ಗೆ ತಲೆಕೆಡಿಸಿಕೊಳ್ಳುವ ಬದಲು ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ತಲೆಕೆಡಿಸಿಕೊಂಡರೆ ಒಳ್ಳೆಯದು ಎಂದು ಪ್ರಿಯಾಂಕ್ ಖರ್ಗೆ ಪ್ರತಾಪ್ ಹೇಳಿಕೆಗೆ ಟಾಂಗ್ ನೀಡಿದ್ದಾರೆ.

- Advertisement -

Latest Posts

Don't Miss