Political News: ಪ್ರತಾಪ್ ಸಿಂಹರನ್ನು ಪರೋಕ್ಷವಾಗಿ ಪೇಟೆ ರೌಡಿ ಎಂದು ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ

Political News: ಮೈಸೂರಿನಲ್ಲಿ ಗಣೇಶ್ ಮೆರವಣಿಗೆ ವೇಳೆ ಪಟಾಕಿ ಸಿಡಿಸುವಂತಿಲ್ಲ. ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೀನಿ ಎಂದು ಪೋಲೀಸ್ ಅಧಿಕಾರಿ ಹೇಳಿರುವ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು, ಪೋಲೀಸ್ ಸ್ಟೇಶನ್‌ಗೆ ನುಗ್ಗುತ್ತೇವೆ ಎಂದಿದ್ದಾರೆ.

ಈ ಹೇಳಿಕೆಗೆ ತಮ್ಮ ಎಕ್ಸ್ ಖಾತೆಯಲ್ಲಿ ಟಾಂಗ್ ನೀಡಿರುವ ಗೃಹಸಚಿವ ಪ್ರಿಯಾಂಕ್ ಖರ್ಗೆ, ಮೈಸೂರಿನ ಕಡೆಯ “ಪೇಟೆ ರೌಡಿ”ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಅಸ್ತಿತ್ವ ಕಳೆದುಕೊಂಡ ಕತ್ತಲೆ ಜಗತ್ತಿನ ಆತ್ಮದಂತೆ ಪರಿತಪಿಸುತ್ತಿರುವ ಆ ವ್ಯಕ್ತಿ ವಾರಕ್ಕೊಮ್ಮೆ ಗೋಗರೆದು ಮಾಧ್ಯಮಗಳನ್ನು ಕರೆಸಿಕೊಂಡು ಅಸಂಬದ್ಧ ಹೇಳಿಕೆ ನೀಡುತ್ತಾ ಅಸ್ತಿತ್ವ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾನೆ ಎಂದು ಹೆಸರು ಹೇಳದೇ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ..

“ಪೊಲೀಸ್ ಠಾಣೆಗೆ ನುಗ್ಗುತ್ತೇನೆ” ಎಂದಿರುವ ಆ ವ್ಯಕ್ತಿಗೆ ಮುಕ್ತ ಆಹ್ವಾನವಿದೆ, ಪೊಲೀಸ್ ಠಾಣೆಗೆ ನುಗ್ಗಿದ ನಂತರ ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುವುದು!

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಕರ್ತವ್ಯಕ್ಕೆ ಯಾರೇ ಅಡ್ಡಿಪಡಿಸಿದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲು ಸನ್ನದ್ದವಾಗಿದೆ ಗೃಹ ಇಲಾಖೆ, ಸೂಕ್ಷ್ಮ ಸಂದರ್ಭಗಳನ್ನು ಬಳಸಿಕೊಂಡು ಸಮಾಜದ ಸ್ವಾಸ್ಥ್ಯ ಕದಡುವ ಪ್ರಯತ್ನಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪೊಲೀಸರ ನೈತಿಕ ಸ್ಥೈರ್ಯ ಕಸಿಯಲು ಬಿಡುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

About The Author