Political News: ನಿನ್ನೆಯಿಂದ ಸೋಶಿಯಲ್ ಮೀಡಿಯಾದಲ್ಲಿ 1 ವೀಡಿಯೋ ವೈರಲ್ ಆಗಿದೆ. ದೆಹಲಿಯಲ್ಲಿ ಎಸ್‌ಐಆರ್ ವಿರುದ್ಧ ನಡೆದಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಡಿ.ಕೆ.ಶಿವಕುಮಾರ್ ಕಾಲರ್ ಹಿಡಿದು ಹಿಂದಕ್ಕೆ ತಳ್ಳಿ, ಮುಂದೆ ಹೋದ ರೀತಿ ಮತ್ತು ಹಿಂದೆ ಬಿದ್ದ ಸಿಎಂ ಡಿ.ಕೆ.ಶಿವಕುಮಾರ್ ಅವರು ಜನರ ನಡುವೆ ಸಿಲುಕಿದ ವೀಡಿಯೋ ವೈರಲ್ ಆಗಿತ್ತು.
ಈ ವೀಡಿಯೋ ಶೇರ್ ಮಾಡಿದ ಬಿಜೆಪಿ, ಜೆಡಿಎಸ್ ನಾಯಕರು ಸಿಎಂ ಸಾಹೇಬರಿಗೆ ಈ ಪರಿಸ್ಥಿತಿ ಬರಬಾರದಿತ್ತು. ರಾಹುಲ್ ಗಾಂಧಿ ತಮ್ಮ ಪಕ್ಷದ ನಾಯಕರಿಗೆ ಅದರಲ್ಲೂ 1 ರಾಜ್ಯದ ಸಿಎಂಗೆ ನೀಡುವ ಗೌರವ ಇದೇನಾ ಎಂದು ವಿಪಕ್ಷ ನಾಯಕರು ಪ್ರಶ್ನಿಸಿದ್ದರು.
ಆದರೆ ಇದೀಗ ಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ರಾಹುಲ್ ಗಾಂಧಿ ನನ್ನನ್ನು ತಳ್ಳಲಿಲ್ಲ ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ ಡಿಕೆಶಿ, ಗಲಾಟೆ ಹೆಚ್ಚಾಗುತ್ತಿದ್ದಂತೆ ರಾಹುಲ್ ಗಾಂಧಿ ನನ್ನನ್ನು ಹಿಂದಿರುವ ಗಾಡಿಗೆ ಹೋಗಿ ಹತ್ತುವಂತೆ ಸಲಹೆ ನೀಡಿದರು ಎಂದು ಹೇಳಿದ್ದಾರೆ.
ಅಲ್ಲದೇ ವೈರಲ್ ವೀಡಿಯೋ ಬಗ್ಗೆ ಬಿಜೆಪಿಗರು ವ್ಯಂಗ್ಯವಾಡುತ್ತಿರುವ ಬಗ್ಗೆ ಉತ್ತರಿಸಿದ ಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿಗರಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ ಅದಕ್ಕೆ ಕಾಳಜಿ ತೋರಿಸುತ್ತಿದ್ದಾರೆಂದು ಟೀಕಿಸಿದ್ದಾರೆ.




