- Advertisement -
Political News: ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾದ ರೇಖಾ ಗುಪ್ತಾ ಅವರು ದೆಹಲಿಯ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಷಾ, ಜೆ.ಪಿ.ನಡ್ಡಾ ಸೇರಿ ಹಲವು ಬಿಜೆಪಿ ನಾಯಕರ ಸಮ್ಮುಖದಲ್ಲಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ವಿ.ಕೆ.ಸಕ್ಸೆನಾ ಪ್ರಮಾಣವಚನ ಬೋಧಿಸಿದ್ದಾರೆ. ಇದೇ ವೇಳೆ ಹಲವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಷ್ಟ್ರ ರಾಜಧಾನಿಯ 4ನೇ ಮತ್ತು ಬಿಜೆಪಿಯ ಎರಡನೇಯ ಮಹಿಳಾ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಿಜೆಪಿಯ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಸುಷ್ಮಾಸ್ವರಾಜ್, ಕಾಂಗ್ರೆಸ್‌ನಿಂದ ಶೀಲಾ ದೀಕ್ಷಿತ್ ಮತ್ತು ಎಎಪಿಯಿಂದ ಆತಿಶಿ ಸಿಎಂ ಆಗಿದ್ದರು. ಇದೀಗ ದೆಹಲಿಯ 4ನೇಯ ಮಹಿಳಾ ಸಿಎಂ ಆಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದ್ದಾರೆ.
- Advertisement -