Political News: ಬಿಜೆಪಿ ಹಿರಿಯ ನಾಯಕ ಲಾಲಕೃಷ್ಣ ಅಡ್ವಾಣಿ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ನವದೆಹಲಿಯ ಅಪೊಲೋ ಆಸ್ಪತ್ರೆಗೆ ಅಡ್ವಾಣಿ ಅವರನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಲಾಗುತ್ತಿದೆ.
ಕಳೆದ ತಿಂಗಳಷ್ಟೇ ಲಾಲಕೃಷ್ಣ ಅಡ್ವಾಣಿಯವರು 97ನೇ ವರ್ಷಕ್ಕೆ ಕಾಲಿರಿಸಿದ್ದಾರೆ. ಅಲ್ಲದೇ ಈ ವರ್ಷ ಲಾಲಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಕೂಡ ಸಿಕ್ಕಿದೆ. ಖುದ್ದು ಪ್ರಧಾನಿ ಮೋದಿ, ಗೃಹಸಚಿವ ಅಮಿತ್ ಶಾ, ರಾಷ್ಟ್ರಪತಿ ದ್ರೌಪದಿ ಮುರ್ಮು, ಅಡ್ವಾಣಿ ಮನೆಗೆ ಹೋಗಿ, ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿದ್ದಾರೆ.
ಅಡ್ವಾಣಿ ಅವರನ್ನು ಅಯೋಧ್ಯೆಯ ರಾಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ಆದರೆ ಅನಾರೋಗ್ಯ ಕಾರಣದಿಂದ ಅಡ್ವಾಣಿ ಕಾರ್ಯಕ್ರಮಕ್ಕೆ ಹೋಗಲಾಗಲಿಲ್ಲ. ರಾಮಮಂದಿರಕ್ಕೆ ನ್ಯಾಯ ಸಿಗಲು, ಅಲ್ಲಿದ್ದ ಬಾಬ್ರಿ ಮಸೀದಿ ತೆಗೆದು, ರಾಮಮಂದಿರ ನಿರ್ಮಿಸಬೇಕು ಎಂದು ಹೋರಾಡಿದವರಲ್ಲಿ ಅಡ್ವಾಣಿ ಕೂಡ ಒಬ್ಬರು. ಹಾಗಾಗಿ ಈ ಮುಖ್ಯವಾದ ಕಾರ್ಯಕ್ರಮದಲ್ಲಿ ಅವರನ್ನು ಮರೆಯದೇ ಕರೆಯಲಾಗಿತ್ತು. ಆದರೆ ಅನಾರೋಗ್ಯದ ಕಾರಣ ಅಡ್ವಾಣಿ ಬರಲಾಗಲಿಲ್ಲ.
ಇದೀಗ ಅಡ್ವಾಣಿ ಆಸ್ಪತ್ರೆಗೆ ದಾಖಲಾಗಿದ್ದು, ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಲವರು ಪ್ರಾರ್ಥಿಸಿದ್ದಾರೆ.