Political News: ನಂದಿಬೆಟ್ಟದಲ್ಲಿಂದು ಕಾಂಗ್ರೆಸ್ ಸರ್ಕಾರ ವಿಶೇಷ ಸಚಿವ ಸಂಪುಟ ಸಭೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು.
ಈ ವೇಳೆ ಸಿಎಂ ಸಿದ್ದರಾಮಯ್ಯ ಹಲವು ತೀರ್ಮಾನಗಳನ್ನು ತೆಗೆದುಕ“ಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ, ಈ ಸಭೆಯಲ್ಲಿ ನಾವು ಹಲವು ಐತಿಹಾಸಿಕ ತೀರ್ಮಾನಗಳನ್ನು ಕೈಗೊಂಡಿದ್ದೇವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ನಾಮಕರಣ ಮಾಡಿದ್ದೇವೆ. ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು ಹೆಸರಿಡಲು ತೀರ್ಮಾನಿಸಿದ್ದೇವೆ. ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವ ವಿದ್ಯಾಲಯ ಎಂದು ಮರು ನಾಮಕರಣ ಮಾಡಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ.
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಪರಿಶೀಲಿಸಲು ಹೆಚ್.ಕೆ. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ. ಒಟ್ಟಾರೆ ಈ ಭಾಗದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು / ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲು ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.