Tuesday, October 7, 2025

Latest Posts

Political News: ಬಿಎಸ್‌ವೈ ವಿರುದ್ಧ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

- Advertisement -

Political News: ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಮರುಜೀವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯ ತೀರ್ಪನ್ನು ಸುಪ್ರೀಂಕೋರ್ಟ್‌ ಕಾಯ್ದಿರಿಸಿದೆ. ಇಷ್ಟು ದಿನ ನಿರಾಳರಾಗಿದ್ದ ಮಾಜಿ ಸಿಎಂಗೆ ಈಗದ ಕೋರ್ಟ್ ತೀರ್ಪಿನತ್ತ ಚಿತ್ತ ನೆಟ್ಟಂತಾಗಿದೆ. ಇನ್ನೂ ಪ್ರಮುಖ ಈ ವಿಚಾರವಾಗಿ ಬೆಂಗಳೂರಿನ ಉದ್ಯಮಿ ಎ.ಆಲಂ ಪಾಷಾ ಎನ್ನುವವರು ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದರು. ಅಲ್ಲದೆ ಈ ಬಗ್ಗೆ ವಿಚಾರಣೆಗಾಗಿ ಆ ಪ್ರಕರಣದ ಮರುಶಕ್ತಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ 2021 ರ ಜನವರಿ 5ರಂದು ಪುರಸ್ಕರಿಸಿತ್ತು. ಈ ಮನವಿಯನ್ನು ಪ್ರಶ್ನಿಸಿ ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್‌ ಮೆಟ್ಟೆಲೇರಿ ಮೇಲ್ಮನವಿ ಸಲ್ಲಿಸಿದ್ದರು.

ಹೈಕೋರ್ಟ್‌ ಆದೇಶ ಮರುಪರಿಶೀಲನೆ ಪ್ರಶ್ನೆ..!

ಅಲದೆ ಇದೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ನ್ಯಾಯಮೂರ್ತಿಗಳಾದ ಜೆಬಿ ಪರ್ದೀವಾಲಾ ಮತ್ತು ನ್ಯಾಯಮೂರ್ತಿ ಮನೋಜ್‌ ಮಿಶ್ರಾ ಅವರಿದ್ದ ನ್ಯಾಯಪೀಠವು ಕಳೆದ ಏಪ್ರಿಲ್‌ 4 ರಂದು ವಿಚಾರಣೆ ಮುಕ್ತಾಯಗೊಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದ ಹಲವಾರು ಪ್ರಶ್ನೆಗಳನ್ನು ನ್ಯಾಯಪೀಠವು ಎತ್ತಿತ್ತು. ಅಲ್ಲದೆ ಸಿಆರ್‌ಪಿಸಿ ಸೆಕ್ಷನ್‌ 156 3 ರ ಅಡಿಯಲ್ಲಿ ಪ್ರಕರಣದ ತನಿಖೆಯಾಗಿದೆಯೇ ಹಾಗೂ ಈಗಲೂ ಸಹ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆಕ್ಷನ್‌ 17 ಎ ಅನ್ವಯ ಸೂಕ್ತ ಸರಕಾರಿ ಪ್ರಾಧಿಕಾರಗಳಿಂದ ಪೂರ್ವಾನುಮತಿಯ ಅಗತ್ಯವಿದೆಯೇ ಎಂಬ ವಿವಿಧ ಕಾನೂನಾತ್ಮಕ ಪ್ರಶ್ನೆಗಳನ್ನು ನ್ಯಾಯಪೀಠ ಕೇಳಿದೆ. ದೂರುದಾರರು ಸಲ್ಲಿಸಿದ್ದ ಹಿಂದಿನ ದೂರನ್ನು ಪೂರ್ವಾನುಮತಿಯಿಲ್ಲದ ಕಾರಣಕ್ಕೆ ರದ್ದುಗೊಳಿಸಿದ್ದನ್ನು ಪ್ರಸ್ತಾಪಿಸಿದ ನ್ಯಾಯಪೀಠ, ಆರೋಪಿಯು ತನ್ನ ಸ್ಥಾನದಿಂದ ಕೆಳಗಿಳಿದ ನಂತರ ಹೊಸ ದೂರು ದಾಖಲಿಸುವುದಕ್ಕೆ ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಏನಿದು ಪ್ರಕರಣ..?

ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಮತ್ತು ಕರ್ನಾಟಕ ಉದ್ಯೋಗ ಮಿತ್ರ ಸಂಸ್ಥೆಯ ಮಾಜಿ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಕೆಎಸ್‌ ವಿರುದ್ಧ ಭ್ರಷ್ಟಾಚಾರ ಮತ್ತು ಕ್ರಿಮಿನಲ್‌ ಸಂಚು ಆರೋಪ ಮಾಡಿದ್ದರು. ದೇವನಹಳ್ಳಿಯಲ್ಲಿ 2011 ರಲ್ಲಿ 26 ಎಕರೆ ಡಿನೋಟಿಫಿಕೇಷನ್‌ ಮಾಡಿ ಅಕ್ರಮ ನಡೆಸಲಾಗಿದೆ ಎಂದು ಆರೋಪಿಸಿ ಆಲಂ ಪಾಷಾ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಯಡಿಯೂರಪ್ಪ ಹಾಗೂ ನಿರಾಣಿ ಅವರನ್ನು ಬಂಧಿಸಿದಂತೆ ಸುಪ್ರೀಂ ಕೋರ್ಟ್‌ 2021ರ ಜನವರಿ 27 ರಂದು ಆದೇಶ ನೀಡಿತ್ತು.

- Advertisement -

Latest Posts

Don't Miss