Tuesday, May 13, 2025

Latest Posts

Political News: ಜನಿವಾರ ತೆಗೆಯಬೇಕೆಂಬ ಯಾವುದೇ ಮಾರ್ಗಸೂಚಿಯನ್ನೂ ಸರ್ಕಾರ ಹೊರಡಿಸಿಲ್ಲ, ಇದು ಖಂಡನೀಯ: ಸಚಿವ ಗುಂಡೂರಾವ್

- Advertisement -

Political News: ಸಿಇಟಿ ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿಯ ಜನಿವಾರ ಕತ್ತರಿಸಿದ ಮತ್ತು ಇನ್ನೋರ್ವ ಬ್ರಾಹ್ಮಣ ವಿದ್ಯಾರ್ಥಿ ಜನಿವಾರ ಧರಿಸಿದ್ದಾನೆಂದು ಅವನಿಗೆ ಪರೀಕ್ಷೆ ಬರೆಯಲು ಅವಕಾಶ ಕೊಡದೇ ಇರುವ ವಿಷಯವನ್ನು ಎಲ್ಲ ರಾಜಕೀಯ ರಾಯಕರು ಖಂಡಿಸಿದ್ದಾರೆ.

ಈ ಬಗ್ಗೆ ಆಕ್ರೋಶ ಹೊರಹಾಕಿರುವ ಆರೋಗ್ಯ ಸಚಿ ದಿನೇಶ್ ಗುಂಡೂರಾವ್, ಇದು ಅತ್ಯಂತ ಖಂಡನೀಯ ಸುದ್ದಿ ಎಂದಿದ್ದಾರೆ. ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳು ಜನಿವಾರ ತೆಗೆಯಬೇಕು ಎಂಬ ಪರೀಕ್ಷಾ ಕೇಂದ್ರದ ಅಧಿಕಾರಿಗಳ ಅತಿರೇಖದ ವರ್ತನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಜನಿವಾರ ತೆಗೆಯಬೇಕೆಂಬ ಯಾವುದೇ ಮಾರ್ಗಸೂಚಿಯನ್ನೂ ಸರ್ಕಾರ ಹೊರಡಿಸಿಲ್ಲ. ಈ ಬಗ್ಗೆ ಕೆಇಎ ಅಧಿಕಾರಿಗಳು ಹಾಗು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ ಸುಧಾಕರ್ ಅವರು ಸ್ಪಷ್ಟಪಡಿಸಿದ್ದಾರೆ.

ಇಂತಹ ಅತಿರೇಖದ ವರ್ತನೆ ತೋರಿ, ವಿದ್ಯಾರ್ಥಿಗಳಿಗೆ ಹಾಗು ಬ್ರಾಹ್ಮಣ ಸಮುದಾಯಕ್ಕೆ ಅಪಚಾರ ಎಸಗಿದ ಅಧಿಕಾರಿಯ ವಿರುದ್ಧ ಸರ್ಕಾರ ಶಿಸ್ತುಕ್ರಮ ಕೈಗೊಳ್ಳಲಿದೆ. ಕಾನೂನು ನಿರ್ವಹಿಸುವ ವೇಳೆ ಅಧಿಕಾರಿಗಳು ವಿವೇಚನೆಯಿಂದ ವರ್ತಿಸಬೇಕು ಮತ್ತು ಅನಗತ್ಯ ಗೊಂದಲಗಳಿಗೆ ಆಸ್ಪದ ಮಾಡಿಕೊಡಬಾರದು. ಕಾರ್ಯನಿರ್ವಹಣೆಯಲ್ಲಿ ಯಾವುದೇ ಗೊಂದಲಗಳಿದ್ದರೆ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಬೇಕೇ ವಿನಃ ಮನಸೋ ಇಚ್ಛೆ ವರ್ತಿಸಿ ಸಮಾಜದ ಸ್ವಾಸ್ತ್ಯ ಕೆಡಿಸಿದರೆ ಅದಕ್ಕೆ ತಕ್ಕ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

- Advertisement -

Latest Posts

Don't Miss