Monday, June 16, 2025

Latest Posts

Political News: ಇಂಥ ಬೇಜವಾಬ್ದಾರಿಗೆ ರಾಜ್ಯ ಸರ್ಕಾರವೇ ನೇರ ಹೊಣೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

- Advertisement -

Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅವಘಡ ಸಂಭವಿಸಿ, 11 ಜನ ಸಾವನ್ನಪ್ಪಿದ್ದಾರೆ. ಐಪಿಎಲ್‌ನಲ್ಲಿ ಆರ್‌ಸಿಬಿ ಮ“ದಲ ಬಾರಿ ಕಪ್ ಗೆದ್ದ ಸಂಭ್ರಮಾಚರಣೆ ಮತ್ತು ಸನ್ಮಾನ ಕಾರ್ಯಕ್ರಮವಿದ್ದ ಕಾರಣಕ್ಕೆ ಕ್ರೀಡಾಳುಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಈ ವೇಳೆ ಅವರನ್ನು ನೋಡಲು ಬಂದಿದ್ದ ಅಭಿಮಾನಿಗಳ ನಡುವೆ ಕಾಲ್ತುಳಿತ ಉಂ”ಾಗಿ 6 ವರ್ಷದ ಮಗು ಸೇರಿ, 11 ಜನ ಸಾವನ್ನಪ್ಪಿದ್ದಾರೆ.

ಈ ಸಾವಿಗೆ ಸಂತಾಪ ಸೂಚಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ ಎಂದಿದ್ದಾರೆ.

ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರಕಾರವೇ ಹೊತ್ತುಕೊಳ್ಳಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರಕಾರ ಕೂಡಲೇ ಧಾವಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕ್ರೀಡಾಂಗಣ ಹಾಗೂ ವಿಧಾನಸೌಧದ ಬಳಿ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬಂದಿದ್ದ ಕ್ರಿಕೆಟ್ ಪ್ರೇಮಿಗಳು ಗಾಬರಿ, ಆತುರಕ್ಕೆ ಒಳಗಾಗದೆ ಕ್ಷೇಮವಾಗಿ ಮನೆ ತಲುಪಬೇಕು ಎಂಬುದು ನನ್ನ ಕಳಕಳಿ. ಪೊಲೀಸರು ಈ ನಿಟ್ಟಿನಲ್ಲಿ ತುರ್ತುಕ್ರಮ ವಹಿಸಿ ಜನರಿಗೆ ನೆರವಾಗಬೇಕು ಎಂದು ಕೇಂದ್ರ ಸಚಿವರು ಆಗ್ರಹಿಸಿದ್ದಾರೆ.

- Advertisement -

Latest Posts

Don't Miss