Political News: ಮೈಸೂರಿನಲ್ಲಿಂದು ಮಾಧ್ಯಮದ ಜೆತ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು, ಮಾರ್ಗ ಮಧ್ಯೆ ಭೇಟಿ ಮಾಡಿದ್ದೇನೆ. ಈ ಸಂದರ್ಭದಲ್ಲಿ ಅವರ ಜೊತೆ ಯಾವುದೇ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿಲ್ಲ ಎಂದಿದ್ದಾರೆ.
ಸಂಜೆ ಅವರು ದೆಹಲಿಗೆ ತೆರಳುವಾಗಲೂ ಬೀಳ್ಕೊಡಲಾಗುವುದು. ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲವಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ. ಶಾಸಕರಿಗೆ ಈ ಕುರಿತು ಮಾಹಿತಿ ಇರುವುದಿಲ್ಲ. ಈ ವಿಚಾರದಲ್ಲಿ ನಾನು ಅಥವಾ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಬೇಕು ಎಂದು ಸಿಎಂ ಹೇಳಿದ್ದಾರೆ.
ಅಧಿಕಾರ ಹಂಚಿಕೆ ವಿಚಾರದಲ್ಲಿ ಅಂತಿಮವಾಗಿ ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು. ಈ ವಿಚಾರದಲ್ಲಿ ನಮ್ಮ ಪಕ್ಷದ ಶಾಸಕರಿಗಿಂತ ಮಾಧ್ಯಮಗಳು ಹೆಚ್ಚು ಆಸಕ್ತಿ ತೋರುತ್ತಿವೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ. ಬಿಜೆಪಿ – ಜೆಡಿಎಸ್ ಮೈತ್ರಿಯಿಂದ ಪಾಲಿಕೆ ಚುನಾವಣೆಗಳಲ್ಲಿ ಯಾವುದೇ ಪರಿಣಾಮ ಉಂಟಾಗುವುದಿಲ್ಲ. ಜನರು ನಮ್ಮನ್ನು ಆಶೀರ್ವದಿಸುತ್ತಾರೆ ಎಂಬ ವಿಶ್ವಾಸವಿದೆ.
ಬಹುತೇಕ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸಲಾಗುವುದು. ಮುಖ್ಯಮಂತ್ರಿಯಾಗಿ ಸಾವಿರ ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಫೆಬ್ರವರಿ 13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶವನ್ನು ಆಯೋಜಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು, ಮಾರ್ಗ ಮಧ್ಯೆ ಭೇಟಿ ಮಾಡಿದ್ದೇನೆ. ಈ ಸಂದರ್ಭದಲ್ಲಿ ಅವರ ಜೊತೆ ಯಾವುದೇ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿಲ್ಲ. ಸಂಜೆ ಅವರು ದೆಹಲಿಗೆ ತೆರಳುವಾಗಲೂ ಬೀಳ್ಕೊಡಲಾಗುವುದು.
ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲವಿಲ್ಲ. ಇದೆಲ್ಲ ಮಾಧ್ಯಮಗಳ… pic.twitter.com/iFL2b6J8dE
— Siddaramaiah (@siddaramaiah) January 13, 2026




