Thursday, December 19, 2024

Latest Posts

Political News: ಅಮಿತ್ ಶಾ ಅವರು ಆಡಿದ ಮಾತುಗಳಲ್ಲಿ ಆಶ್ಚರ್ಯವೇನಿಲ್ಲ: ಸಿಎಂ ಸಿದ್ದರಾಮಯ್ಯ

- Advertisement -

Political News: ಸಂಸತ್‌ನಲ್ಲಿ ಗೃಹಸಚಿವ ಅಮಿತ್ ಷಾ ಅಂಬೇಡ್ಕರ್ ಬಗ್ಗೆ ಕೊಟ್ಟ ಹೇಳಿಕೆ ಬಗ್ಗೆ, ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ಅವರು ರಾಜ್ಯಸಭೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಆಡಿರುವ ತುಚ್ಛೀಕರಣದ ಮಾತುಗಳನ್ನು ಇಡೀ ದೇಶವೇ ಕೇಳಿದೆ. ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಭಾರತೀಯ ಜನತಾ ಪಕ್ಷದ ಅಂತರಂಗದ ಅಭಿಪ್ರಾಯವನ್ನು ಬಹಿರಂಗವಾಗಿ, ಧೈರ್ಯದಿಂದ ದೇಶದ ಮುಂದೆ ತೆರೆದಿಟ್ಟದ್ದಕ್ಕಾಗಿ ಮತ್ತು ಕೊನೆಗೂ ತಮ್ಮ ಜೀವಮಾನದಲ್ಲಿ ಒಂದು ಸತ್ಯವನ್ನಾದರೂ ಹೇಳಿದ್ದಕ್ಕೆ ಅವರನ್ನು ನಾನು ಅಭಿನಂದಿಸುತ್ತೇನೆ. ಇದರ ನಂತರ ಇಡೀ ದೇಶ ಬಿಜೆಪಿ ಮತ್ತು ಅದರ ನಾಯಕರ ವಿರುದ್ಧ ತಿರುಗಿಬಿದ್ದಾಗ ನಿರೀಕ್ಷೆಯಂತೆ ತಮ್ಮ ಮಾತನ್ನು ತಿರುಚಲಾಗಿದೆ, ಅಂಬೇಡ್ಕರ್ ಅವರ ಬಗ್ಗೆ ನಮಗೆ ಗೌರವವಿದೆ’’ ಎಂದೆಲ್ಲ ಸ್ಪಷ್ಟೀಕರಣವನ್ನು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆತ್ಮೀಯ ಸ್ನೇಹಿತನ ರಕ್ಷಣೆಗೆ ಧಾವಿಸಿ ಉದ್ದನೆಯ ಹೇಳಿಕೆಯನ್ನು ನೀಡಿದ್ದಾರೆ. ಇವೆಲ್ಲವೂ ನಿರೀಕ್ಷಿತವಾದುದ್ದು ಎಂದು ಸಿಎಂ ಹೇಳಿದ್ದಾರೆ.

ಅಮಿತ್ ಶಾ ಅವರು ಆಡಿದ ಮಾತುಗಳಲ್ಲಿ ಆಶ್ಚರ್ಯವೇನಿಲ್ಲ. ಬಿಜೆಪಿ ಮತ್ತು ಸಂಘ ಪರಿವಾರದ ನಾಯಕರ ಮನಸ್ಸಲ್ಲಿದ್ದದ್ದು, ಅವರ ಬಾಯಿಯಲ್ಲಿ ಬಂದು ಬಿಟ್ಟಿದೆ. ಇದು ಶಾ ಅವರ ಬಾಯಿ ತಪ್ಪಿನಿಂದ ಬಂದುದ್ದಲ್ಲ ಎನ್ನುವುದಕ್ಕೆ ಇತಿಹಾಸವೇ ಸಾಕ್ಷಿ.

ಅಂಬೇಡ್ಕರ್ ಅವರನ್ನು ಬಿಜೆಪಿ ನಾಯಕರು ದ್ವೇಷಿಸಲು ಮುಖ್ಯ ಕಾರಣ ಅವರು ಕೊಟ್ಟು ಹೋಗಿರುವ ಸಂವಿಧಾನ. ಈ ಲಿಖಿತ ಸಂವಿಧಾನ ಜಾರಿಗೆ ಬರುವ ವರೆಗೆ ನಮ್ಮಲ್ಲಿ ಜಾತಿ ಮತ್ತು ಲಿಂಗ ತಾರತಮ್ಯವನ್ನು ಶಾಸನವನ್ನಾಗಿ ಮಾಡಿರುವ ಮನುಸ್ಮೃತಿ ಜಾರಿಯಲ್ಲಿತ್ತು. ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವಗಳನ್ನು ಒಳಗೊಂಡ ಸಂವಿಧಾನವನ್ನು ಮಾತ್ರ ಕೊಟ್ಟು ಹೋಗಿಲ್ಲ, ಅಲ್ಲಿಯ ವರೆಗೆ ಜಾರಿಯಲ್ಲಿದ್ದ ಅಲಿಖಿತ ಸಂವಿಧಾನವಾದ ಮನುಸ್ಮೃತಿಯನ್ನು ಸುಟ್ಟು ಹೋಗಿದ್ದರು. 1927ರ ಡಿಸೆಂಬರ್ 25ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸಾರ್ವಜನಿಕವಾಗಿ ಸುಟ್ಟು ಹಾಕಿದ್ದರು. ಅದರ 22 ವರ್ಷಗಳ ನಂತರ ಅವರು ಹೊಸ ಸಂವಿಧಾನವನ್ನು ಹುಟ್ಟುಹಾಕಿದ್ದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿ ಮತ್ತು ಸಂಘ ಪರಿವಾರದಲ್ಲಿರುವ ಮನುವಾದಿಗಳು ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ದ್ವೇಷಿಸಲು ಇದು ಕಾರಣ. ಇತಿಹಾಸವನ್ನು ಓದಿರುವ ನಮ್ಮಂತಹವರಿಗೆ ಬಿಜೆಪಿ ಮತ್ತು ಆರ್ ಎಸ್ ಎಸ್ ನ ಅಂಬೇಡ್ಕರ್ ದ್ವೇಷ ಹೊಸದಲ್ಲ.

ಬಿಜೆಪಿಯಾಗಲಿ, ಆರ್ ಎಸ್ ಎಸ್ ಆಗಲೀ ಇಲ್ಲಿಯ ವರೆಗೆ ಸಂವಿಧಾನ ಮತ್ತು ಅಂಬೇಡ್ಕರ್ ಅವರನ್ನು ವಿರೋಧಿಸಿದ್ದ ಆರ್ ಎಸ್ ಎಸ್ ಸಂಪಾದಕೀಯವನ್ನಾಗಲಿ, ಗೋಳ್ವಾಳ್ಕರ್ ಮತ್ತು ಸಾವರ್ಕರ್ ಅಭಿಪ್ರಾಯವನ್ನಾಗಲಿ ತಿರಸ್ಕರಿಸಿಲ್ಲ. ಅಂದರೆ ಇವರ ಮನಸ್ಸಿನೊಳಗೆ ಅಂಬೇಡ್ಕರ್ ಬಗೆಗಿನ ದ್ವೇಷ, ಅಸೂಯೆ, ಅಸಹನೆ ಈಗಲೂ ಜೀವಂತವಾಗಿದೆ ಎಂದು ಅರ್ಥವಲ್ಲವೇ? ಇದರಿಂದಾಗಿ ಅಮಿತ್ ಶಾ ಅವರು ಅಂಬೇಡ್ಕರ್ ಅವರ ಬಗ್ಗೆ ಆಡಿದ ಮಾತು ನನಗೆ ಆಶ್ಚರ್ಯ ಉಂಟು ಮಾಡಿಲ್ಲ. ಸಮಾಧಾನದ ಸಂಗತಿ ಎಂದರೆ ಇದೀಗ ಇಡೀ ದೇಶಕ್ಕೆ ಬಿಜೆಪಿಯವರ ಅಂತರಂಗದ ಅರಿವಾಗಿದೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಅಮಿತ್ ಶಾ, ಅವರು ಹೇಳುವ ವ್ಯಸನ ನಮ್ಮ ಪಾಲಿನ ಅಂಬೇಡ್ಕರ್ ಸ್ಮರಣೆ. ನಮ್ಮನ್ನೆಲ್ಲ ಇಲ್ಲಿಗೆ ತಂದು ನಿಲ್ಲಿಸಿ ನಮಗೆ ಸ್ಥಾನಮಾನ, ಗೌರವ ಮತ್ತು ಜನರ ಸೇವೆ ಮಾಡುವ ಅವಕಾಶವನ್ನು ಕೊಟ್ಟಿದೆ ಎನ್ನುವುದನ್ನು ನಾವು ಮರೆತಿಲ್ಲ. ನಾನು ಮಾತ್ರ ಅಲ್ಲ, ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಕೊಟ್ಟಿರುವ ಸಂವಿಧಾನ ಇಲ್ಲದೆ ಇರುತ್ತಿದ್ದರೆ ಗೃಹಸಚಿವರಾಗಿ ಬದುಕು ಕೊಟ್ಟ ಮಹಾತ್ಮನನ್ನೇ ತುಚ್ಛೀಕರಿಸುವ ಅವಕಾಶ ಅವರಿಗೂ ಸಿಗುತ್ತಿರಲಿಲ್ಲ. ಶಾ ಅವರು ತಮ್ಮೂರಿನಲ್ಲಿ ಎಲ್ಲಾದರೂ ಗುಜರಿ ವ್ಯಾಪಾರ ಮಾಡಿಕೊಂಡು ಇರಬೇಕಾಗುತ್ತಿತ್ತು ಎಂದು ಸಿಎಂ ಸಿದ್ದರಾಮಯ್ಯ ಅಮಿತ್ ಷಾ ವಿರದ್ಧ ವಾಗ್ದಾಳಿ ನಡೆಸಿದ್ದಾರೆ.
https://youtu.be/OaZQ5rFJZcI
- Advertisement -

Latest Posts

Don't Miss