Political News: ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಡಿಕೆಶಿ ಹೇಳಿದ್ದೇನು..?

Political News: ನಾನೇ 5 ವರ್ಷ ಸಿಎಂ ಆಗಿರುತ್ತೇನೆ. ನಮ್ಮ ಸರ್ಕಾರ ಬಂಡೆಯಂತೆ ಗಟ್ಟಿಯಾಗಿರುತ್ತದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಅವರು, ನನ್ನ ಬಳಿ ಇನ್ನು ಯಾವ ಆಯ್ಕೆ ಇದೆ ಎಂದು ಡಿಸಿಎಂ ಡಿಕೆ ಪ್ರಶ್ನಿಸಿದ್ದಾರೆ. ಅಲ್ಲದೇ, ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನೇ ಮಾಡುತ್ತೇವೆ. ಲಕ್ಷಾಂತರ ಕಾರ್ಯಕರ್ತರ ಬೆಂಬಲವಿದೆ. ಅವರ ಆಸೆ ಆಕಾಂಕ್ಷೆಗಳನ್ನು ಪೂರೈಸುತ್ತೇವೆ. ಸಿಎಂ ಸಿದ್ದರಾಮಯ್ಯ ಪರ ನಿಲ್ಲುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, 5 ವರ್ಷ ನಾನೇ ಸಿಎಂ ಆಗಿರ್ತೀನಿ. ಇದರಿಂದ ಬಿಜೆಪಿಯವರಿಗೆ ಏನು ಸಮಸ್ಯೆ..? ಈ ಬಗ್ಗೆ ಅನುಮಾನ ಬರುವಂತದ್ದು ಏನಿದೆ? ಬಿಜೆಪಿ ನಮ್ಮ ಹೈಕಮಾಂಡ್ ಅಲ್ಲ, ಅವರು ಹೇಳಿದಂಗೆಲ್ಲ ನಮ್ಮಲ್ಲಿ ನಡೆಯಲ್ಲ. ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲುಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ, ಸತ್ಯವನ್ನಲ್ಲ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ. ಅವರು ನಂಬುತ್ತಾರೋ, ಬಿಡುತ್ತಾರೆ ನಾವೆಲ್ಲಾ ಒಟ್ಟಾಗಿದ್ದೇವೆ. ನಮ್ಮ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ ಎಂದು ಸಿಎಂ ಹೇಳಿದ್ದಾರೆ.

About The Author