Political News: ಇಂಡುವಾಳು ಸಚ್ಚಿದಾನಂದ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಮಾಜಿ ಪ್ರಧಾನಿಗಳಾದ ದೇವೇಗೌಡರ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಈ ಬಗ್ಗೆ ಮಾತು ಮುಂದುವರಿಸಿದ ಅವರು, ದೇವೇಗೌಡರ ಬಗ್ಗೆ ಮಾತನಾುವಷ್ಟು ನಾನು ದೊಡ್ಡವನಲ್ಲ. ಆದರೆ ನಾನು ಅವರ ಬಗ್ಗೆ ಹೇಳಬೇಕೆಂದರೆ, ಅವರು ಇಳಿ ವಯಸ್ಸಿನಲ್ಲಿ ಪ್ರಧಾನಿ ಮೋದಿಯವರಿಗೆ ಬೆಂಬಲ ನೀಡುವ ಬಗ್ಗೆ ಯೋಚಿಸಿದ್ದಾರೆ. ರೈತರ ಬಗ್ಗೆ ಮಾತನಾಡುತ್ತಾರೆ. ಬೆಂಗಳೂರಿನಲ್ಲಿನ ನೀರಿನ ಸಮಸ್ಯೆ ಬಗ್ಗೆ ಮಾತನಾಡುತ್ತಾರೆ. ಉತ್ತರ ಕರ್ನಾಟಕ ನೀರಾವರಿ ಸಮಸ್ಯೆಗಳ ಬಗ್ಗೆ ಮಾತನಾಡುತ್ತಾರೆ. ಎಲ್ಲದಕ್ಕೂ ಪರಿಹಾರ ಸಿಗಬೇಕು ಎಂದು ಆಗ್ರಹಿಸುತ್ತಾರೆ.
ಅವರಿಗೆ ಆಡಳಿತ ಮಾಡಲು ಸಿಕ್ಕಿರುವ ಸಮಯವೇ ಕಡಿಮೆ. 1 ವರ್ಷದೊಳದೇ ಪ್ರಧಾನಿಯಾಗಿದ್ದರು. 1 ವರ್ಷಕ್ಕೂ ಕಡಿಮೆ ಸಿಎಂ ಆಗಿದ್ರು. ನೀರಾವರಿ ಸಚಿವರಾಗಿದ್ದಾಗಲೂ ತಾವೇ ರಾಜೀನಾಮೆ ನೀಡಿದರು. ಆದರೆ ಅವರು ಜನರ ಸಮಸ್ಯೆ ಬಗ್ಗೆ ಹೋರಾಡುವುದನ್ನು ಎಂದಿಗೂ ನಿಲ್ಲಿಸಲಿಲ್ಲ ಎಂದು ಹೇಳುತ್ತಾರೆ ಇಂಡುವಾಳು ಸಚ್ಚಿದಾನಂದ.
ಅಲ್ಲದೇ ನರೇಂದ್ರ ಮೋದಿ ಸಂಪುಟದಲ್ಲಿ ಕುಮಾರಣ್ಣ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕದ ಪರ ದೇವೇಗೌಡರು ಮತ್ತು ಕುಮಾರಸ್ವಾಮಿಯವರು ಕೇಂದ್ರದಲ್ಲಿ ಮಾತನಾಡುತ್ತಿದ್ದಾರೆ. ನಮ್ಮ ರಾಜ್ಯಕ್ಕೆ ದೇವೇಗೌಡರು ಹೆಮ್ಮೆ ಅಂತಾರೆ ಸಚ್ಚಿದಾನಂದ. ಸಂಪೂರ್ಣ ಸಂದರ್ಶನಕ್ಕಾಗಿ ವೀಡಿಯೋ ನೋಡಿ.




