Political News: ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಯನ್ನು ಬಗೆಹರಿಸಲು ನವೆಂಬರ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗುತ್ತಿಗೆದಾರರಿಗೆ ಅಂತಿಮ ಗಡುವು ನೀಡಲಾಗಿದೆ. ಸ್ವಚ್ಛ ಬೆಂಗಳೂರು ಹಾಗೂ ಸುಗಮ ಸಂಚಾರವೇ ನಮ್ಮ ಗುರಿಯಾಗಿರುವುದರಿಂದ ಆದಷ್ಟು ಬೇಗ ರಸ್ತೆ ಗುಂಡಿಗಳಿಗೆ ಜಿಬಿಎ ಮುಕ್ತಿ ನೀಡಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಜೆಡಿಎಸ್ ತನ್ನ ಎಕ್ಸ್ ಖಾತೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕುರಿತು ವ್ಯಂಗ್ಯವಾಡಿದೆ. “ಆಗೋ ಪೂಜೆ ಆಗುತ್ತಿರಲಿ, ಊದೋ ಶಂಖ ಊದಿ ಬಿಡುವ” – CM 30%, DCM 30% =60% ಕಾಂಗ್ರೆಸ್. ಎಂದು ಜೆಡಿಎಸ್ ಪೋಸ್ಟ್ ಮಾಡಿದೆ.
ಕಳೆದ ವರ್ಷ (2024) ಸೆಪ್ಟಂಬರ್ ತಿಂಗಳಲ್ಲಿ ಬೆಂಗಳೂರಿನ ಗುಂಡಿ ಬಿದ್ದ ರಸ್ತೆಗಳನ್ನು ಮುಚ್ಚಲು ಬರೋಬ್ಬರಿ 659 ಕೋಟಿ ರೂ. ಖರ್ಚು ತೋರಿಸಿದ್ದೀರಿ. ಈ ವರ್ಷವೂ (2025) ರಸ್ತೆ ಗುಂಡಿಗೆ ತೇಪೆಹಾಕಲು ಬರೋಬ್ಬರಿ 694 ಕೋಟಿ ರೂ. ವೆಚ್ಚ ಮಾಡುತ್ತಿದ್ದೀರಿ.
ಕಾಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಬೆಂಗಳೂರು ಮೂಲಸೌಕರ್ಯಗಳ ಕೊರತೆ ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿಯೂ ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ 60% ಲೆಕ್ಕದಲ್ಲಿ ದೋಚುವುದೇ ಸಿಎಂ , ಡಿಸಿಎಂ ಮೆಗಾ ಪ್ಲ್ಯಾನ್! ಎಂದು ಜೆಡಿಎಸ್ ಆರೋಪಿಸಿದೆ.
ಅಲ್ಲದೇ, ಲೂಟಿಯನ್ನು ಬಿಟ್ಟು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇನ್ನಾದರೂ ಬೆಂಗಳೂರಿನಿಂದ ವಲಸೆ ಹೋಗುತ್ತಿರುವ ಕಂಪನಿಗಳನ್ನು ಮತ್ತು ಉದ್ಯಮಿಗಳನ್ನು ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಿ ಎಂದು ಜೆಡಿಎಸ್ ಆಗ್ರಹಿಸಿದೆ.




