Friday, December 5, 2025

Latest Posts

ಕಿಚ್ಚನ ಬಿಜೆಪಿ ಸೇರ್ಪಡೆ ವಿಚಾರಕ್ಕೆ ನಟ ಪ್ರಕಾಶ್ ರಾಜ್ ಟ್ವೀಟ್

- Advertisement -

political news:

ಚುನಾವಣಾ ಪ್ರಚಾರಕ್ಕಾಗಿ ರಾಜ್ಯ ರಾಜಕಾರಣದಲ್ಲಿ ಒಂದು ವಿಷಯ ಭಾರಿ ಚರ್ಚೆಗೆ ಕಾರಣವಾಗಿದೆ ಅದು ಕನ್ನಡದ ಬಾದ್ ಷಾ ಬಿಜೆಪಿ ಸೇರ್ಪಡೆಯಾಗು ಮೂಲಕ ರಾಜಕಾರಣಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ  ಈ ಸುದ್ದಿ ತಿಳಿಯುತಿದ್ದಂತೆ ನಟ ಪ್ರಕಾಶ್ ರಾಜ್ ಬಿಜೆಪಿ ವಿರುದ್ದ ವಾಗ್ದಾಳಿ ಮಾಡುತ್ತಾ ಬಂದಿದ್ದಾರೆ. ಅದೇ ರೀತಿ ಈ ಸುದೀಪ್ ಬಿಜೆಪಿ ಸೇರ್ಪಡೆ ವಿಚಾರಕ್ಕೂ  ಕೂಡಾ ಮಾತನಾಡಿದ್ದಾರೆ.

ಇದೇ ವಿಚಾರವಾಗಿ ಸಾಮಾಜಿಕ ಮಾಧ್ಯಮದಲ್ಲಿ ಈಗಾಗಲೇ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಕಿಚ್ಚ ಸುದೀಪ್ ಜೊತೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಕಮಲ ಪಕ್ಷ ಸೇರಲಿದ್ದಾರೆ ಎನ್ನುವ ವಿಚಾರ ವರದಿಯಾಗುತ್ತಿದೆ. ಯಾವಾಗಲೂ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಮತ್ತು ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿರುವ ನಟ ಪ್ರಕಾಶ್ ರಾಜ್, ಇಂದು ಕೂಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿ ಬಿಜೆಪಿ ನಾಯಕರಿಂದ ಹರಡಿದ ಮತ್ತು ಹತಾಶ ಬಿಜೆಪಿಯಿಂದ ಹಬ್ಬಿರುವ ಸುಳ್ಳು ಸುದ್ದಿ ಎಂದು ನಾನು ಬಲವಾಗಿ ನಂಬುತ್ತೇನೆ. ಕಿಚ್ಚ ಸುದೀಪ್ ಹೆಚ್ಚು ಸಂವೇದನಾಶೀಲ ನಾಗರಿಕರಾಗಿದ್ದು, ಇದಕ್ಕೆ ಬಲಿಯಾಗುವುದಿಲ್ಲ ಎಂದೇ ನಾನು ಭಾವಿಸುತ್ತೇನೆ. ಕರ್ನಾಟಕದಲ್ಲಿ ಸೋಲುವ ಭಯದಿಂದ ಭ್ರಷ್ಟ ಬಿಜೆಪಿ ಹರಡುತ್ತಿರುವ ಸುಳ್ಳು ಸುದ್ದಿ ಇದಾಗಿರಲಿ. ನಮ್ಮ ಕಿಚ್ಚ ತಮ್ಮನ್ನು ತಾವು ಮಾರಿಕೊಳ್ಳುವವರಲ್ಲ’ ಎಂದು ಬಹುಭಾಷಾ ನಟ ಕಾಂಗ್ರೆಸ್ ನಾಯಕ ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ.

 

ಒಳ ಮೀಸಲಾತಿ ವಿಚಾರವಾಗಿ ಪ್ರತಿಭಟನೆ

ಕೊನೆಗೂ ಮಾಜಿ ಪತಿಯ ಡೇಟಿಂಗ್ ಬಗ್ಗೆ ಮೌನ ಮುರಿದ ನಟಿ ಸಮಂತಾ..

ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್​ನಿಂದ ಹೊರಗೆ

- Advertisement -

Latest Posts

Don't Miss