Political News: ವಿಜಯಪುರ: ರಾಜ್ಯ ಬಿಜೆಪಿಗೆ ಮೇಜರ್ ಸರ್ಜರಿ ಮಾಡಿದೆ. ಬಿಜೆಪಿ ಹೈಕಮಾಂಡ್ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ , ಬಿವೈ ವಿಜಯೇಂದ್ರಗೆ ಮನ್ನಣೆ ಹಾಕಿದ್ದು, ನೂತನ ಪದಾಧಿಕಾರಿಗಳಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ.. ಈ ಮೂಲಕ ರೆಬೆಲ್ಸ್ಗಳಿಗೆ ಬಿಜೆಪಿ ವರಿಷ್ಠರು ಎಚ್ಚರಿಕೆ ಕೊಟ್ಟಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಹೊಸ ಪದಾಧಿಕಾರಗಳ ಆಯ್ಕೆ ಮತ್ತು ನೇಮಕಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ಹೊರ ಹಾಕಿದ್ದಾರೆ. ಇದರಲ್ಲಿ ಕೆಲವರನ್ನು ಬಿಟ್ಟರೆ ಉಳಿದವರು ಬಾಲ ಬಡಿಯುವವರೆ ಅಂದರೆ ಬಕೆಟ್ ಹಿಡಿಯುವವರೇ ಆಗಿದ್ದಾರೆ. ಉತ್ತಮ ಸಂಘಟನೆಕಾರರನ್ನು ಆಯ್ಕೆ ಮಾಡದೆ ಕೇವಲ ಬೇಕಬೇಕಾದವರನ್ನೇ ಇಟ್ಟುಕೊಂಡಿದ್ದಾರೆ ಎಂದು ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ನಿಯತ್ತಾಗಿರುವ ಮತ್ತು ಶ್ರಮಜೀವಿ ಕಾರ್ಯಕರ್ತರನ್ನು ಯಾಕೆ ಆಯ್ಕೆ ಮಾಡಲಿಲ್ಲ ಅಂತವರು ಕಣ್ಣಿಗೆ ಕಾಣಲಿಲ್ಲವೇ ಎಂದು ಯತ್ನಾಳ್ ಪ್ರಶ್ನೆ ಮಾಡಿದ್ದಾರೆ.
ಏನು ಮಾಡೋದು ನಮ್ಮ ಕಾರ್ಯಕರ್ತರ ಹಣೆಬರಹ. ಆದರೂ ಶುಭ ಹಾರೈಸುತ್ತೇನೆ ನೀವು 2024 ಕ್ಕೆ ಮೋದಿಜಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಕೆಲಸ ಮಾಡ್ರಿ, ಅದನ್ನು ಬಿಟ್ಟು ಹಿಂದ ಅಡ್ಡಾಡುವ ಕೆಲಸ ಮಾಡಬ್ಯಾಡ್ರಿ, ಪಕ್ಷ ಸಂಘಟನೆ ಕೆಲಸ ಮಾಡ್ರಿ. ಅದನ್ನು ಬಾಲ ಬಡಿಯುವವರಾಗಬ್ಯಾಡ್ರಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಯಾರೆಲ್ಲಾ ನೇಮಕ?
ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ರಾಜುಗೌಡ ನಾಯಕ್ ಹಾಗೂ ಎನ್ ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ರೂಪಾಲಿ ಸಂತೋಷ್ ನಾಯಕ್, ಡಾ.ಬಸವರಾಜ್ ಕೇಲಗಾರ, ಮಾಳವಿಕಾ ಅವಿನಾಶ್ ಮತ್ತು ಎಂ.ರಾಜೇಂದ್ರ ಅವರನ್ನು ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.
ವಿ.ಸುನೀಲ್ ಕುಮಾರ್, ಪಿ.ರಾಜೀವ್, ಎನ್.ಎಸ್.ನಂದೀಶ್ ರೆಡ್ಡಿ ಹಾಗೂ ಜೆ.ಪ್ರೀತಮ್ ಗೌಡ ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ.
ಲೋಕಸಭೆಗೆ ಸ್ಪರ್ಧಿಸಲು ನನಗೆ ವೈಯಕ್ತಿಕವಾಗಿ ಆಸಕ್ತಿ ಇಲ್ಲ – ಸಚಿವ ಸಂತೋಷ್ ಲಾಡ್
ಕಿವಿಗೆ ಪೆಟ್ಟು ಬೀಳುವಷ್ಟು ಕೆಟ್ಟದಾಗಿ ಪತ್ನಿಗೆ ಹೊಡೆದ್ರಾ ವಿವೇಕ್ ಬಿಂದ್ರಾ..?
ಭಜರಂಗ್ ಪುನಿಯಾ ಬೆನ್ನಲ್ಲೇ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ ಕುಸ್ತಿಪಟು ವೀರೇಂದ್ರ ಸಿಂಗ್