Thursday, December 12, 2024

Latest Posts

Pancha Rajyagala ಬಹಿರಂಗ ಸಭೆ ಜನೆವರಿ 22 ಕ್ಕೆ ಮುಂದೂಡಿಕೆ.

- Advertisement -

ನವದೆಹಲಿ : ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ನಡುವೆ ಪಂಚರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಗಾಗಿ ಬಹಿರಂಗ ಸಮಾವೇಶ, ಪ್ರಚಾರ ಮತ್ತು ರೋಡ್ ಶೋಗಳಿಗೆ ಅನುಮತಿ ನೀಡಬೇಕೇ ಬೇಡವೇ ಎಂಬುದರ ಬಗ್ಗೆ ಚುನಾವಣಾ ಆಯೋಗ ಶನಿವಾರ ನಿರ್ಧರಿಸಲಿದೆ.

ಶನಿವಾರ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುಶೀಲ್ ಚಂದ್ರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಕೇಂದ್ರ ಆರೋಗ್ಯ ಸಚಿವಾಲಯ, ತಜ್ಞರು, ಚುನಾವಣೆ ನಡೆಯಲಿರುವ ಐದು ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳಿಂದ ಅಭಿಪ್ರಾಯ ಪಡೆದುಕೊಳ್ಳಲಾಗುತ್ತದೆ. ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುವ ನಿಟ್ಟಿನಲ್ಲಿ ಚುನಾವಣಾ ಸಮಿತಿಯು ಶನಿವಾರ ವರ್ಚುವಲ್ ಸಭೆ ನಡೆಸಲಿದೆ. ಈ ವೇಳೆ ದೇಶದಲ್ಲಿ ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಕುರಿತು ಚರ್ಚೆ ನಡೆಯಲಿದೆ.

ಕಳೆದ ಜನವರಿ 8ರಂದು ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರದಲ್ಲಿ ವಿಧಾನಸಭೆ ಚುನಾವಣಾ ದಿನಾಂಕ ಘೋಷಿಸಿದ ಚುನಾವಣಾ ಆಯೋಗ, ಈ ಮೊದಲು ಜನವರಿ 15 ರವರೆಗೆ ಚುನಾವಣಾ ಮೆರವಣಿಗೆ, ರೋಡ್ ಶೋ ಮತ್ತು ಬೈಕ್ ಶೋ ರೀತಿಯ ಪ್ರಚಾರ ಕಾರ್ಯಕ್ರಮಗಳನ್ನು ನಿಷೇಧಿಸಿತ್ತು. ಈಗ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಚುನಾವಣಾ ಪ್ರಚಾರಗಳಿಗೆ ನಿರ್ಬಂಧ ಜಾರಿಯಲ್ಲಿದೆ. ಶನಿವಾರದ ಸಭೆಯಲ್ಲಿ ಪರಿಸ್ಥಿತಿ ಅವಲೋಕಿಸಿಕೊಂಡು ನಂತರ ಬಹಿರಂಗ ಪ್ರಚಾರಕ್ಕೆ ಅವಕಾಶ ನೀಡುವುದೇ ಬೇಡವೇ ಎಂಬುದನ್ನು ತೀರ್ಮಾನಿಸಲಾಗುತ್ತದೆ.

ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಸಾರ್ವಜನಿಕ ಪ್ರಚಾರಕ್ಕೆ ಈ ಮೊದಲು ಜನವರಿ 15 ರವರೆಗೂ ನಿರ್ಬಂಧ ವಿಧಿಸಲಾಗಿತ್ತು. ತದನಂತರ ಜನವರಿ 15 ರಂದು ಸಭೆ ನಡೆಸಿದ ಆಯೋಗವು, ಅಂದು ದೇಶದಲ್ಲಿದ್ದ ಕೊವಿಡ್-19 ಸೋಂಕಿತ ಪ್ರಕರಣಗಳ ಏರಿಕೆಯನ್ನು ಗಮನದಲ್ಲಿ ಇಟ್ಟುಕೊಂಡು ನಿರ್ಬಂಧದ ಅವಧಿಯನ್ನು ಜನವರಿ 22 ರವರೆಗೆ ವಿಸ್ತರಿಸಿತ್ತು.

ಕಳೆದ ಜನವರಿ 8ರಂದು ಐದು ರಾಜ್ಯಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದೆ. ಉತ್ತರಾಖಂಡ ಮತ್ತು ಗೋವಾದಲ್ಲಿ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ಮತದಾನ ನಡೆದರೆ, ಪಂಜಾಬ್ ನಲ್ಲಿ ಫೆಬ್ರವರಿ 20ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 3ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರ ಬೀಳಲಿದೆ.

- Advertisement -

Latest Posts

Don't Miss