Tuesday, July 22, 2025

Latest Posts

2 ದಿನ ಬೆಂಗಳೂರಿನ 70 ಕಡೆ ಕರೆಂಟ್‌ ಕಟ್ : ಸಿಲಿಕಾನ್ ಸಿಟಿಯ ಎಲ್ಲೆಲ್ಲಿ ಕರೆಂಟ್‌ ಕಟ್‌ ?

- Advertisement -

ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್‌ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್‌, ಸೋಪ್‌ ಫ್ಯಾಕ್ಟರಿ ಲೇಔಟ್‌ ಸೇರಿದಂತೆ 70 ಕ್ಕೂ ಅಧಿಕ ಬಡಾವಣೆಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನ ಸಂಜೆವರೆಗೂ ವಿದ್ಯುತ್ ಕಡಿತವಾಗಲಿದೆ.

ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗೆ10:00 ಯಿಂದ ಸಂಜೆ 02:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಮತ್ತು 66/11ಕೆವಿ ಸಹಕಾರನಗರ ಉಪಕೇಂದ್ರ ವ್ಯಾಪ್ತಿಯಲ್ಲಿ ಬುಧವಾರರಂದು ಬೆಳಗ್ಗೆ11:00 ಯಿಂದ ಸಂಜೆ 02:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಜುಲೈ.21 ಎಲ್ಲೆಲ್ಲಿ ವಿದ್ಯುತ್‌ ಕಟ್?
ವಿನಾಯಕ ನಗರ, ವಿಕಕಾಸ್‌ ನಗರ, ಶೋಭಾ ಅಪರ್ಟ್ಮೆಂಟ್‌, 8 ನೇ ಮೈಲ್ ರಸ್ತೆ, ರಾಮಯ್ಯ ಲೇಔಟ್, ಹಾವನೂರು ಎಕ್ಸ್ಟೆನ್. ನಾರಾಯಣ ಲೇಔಟ್, ವಿಡಿಯಾ ಸ್ಕೂಲ್, ಕುವೆಂಪು ನಗರ, ವಿಡಿಯಾ ಬಸ್ ಸ್ಟಾಪ್, ರಿಲಯನ್ಸ್ ಫ್ರೆಶ್, ಮುನಿಕೊಂಡಪ್ಪ ಲೇಔಟ್, ಅಶೋಕ್ ನಗರ, ವಿದ್ಯಾ ನಗರ, ಡಿಫೆನ್ಸ್ ಕಾಲೋನಿ, ಹಾವನೂರು ಎಕ್ಸ್, ಮಂಜುನಾಥ್ ನಗರ, ಮಹಾಲಕ್ಷ್ಮಿ ನಗರ, ಕಾಟರಾಯ ನಗರ, ಸೋಪ್ ಫ್ಯಾಕ್ಟರಿ ಲೇಔಟ್, ವಿಜಯಲಕ್ಷ್ಮಿ ಲೇಔಟ್, ಅಂದಾನಪ್ಪ ಲೇಔಟ್ , ಬಿಟಿಎಸ್ ಲೇಔಟ್, ಸಿದ್ದೇಶ್ವರ ಲೇಔಟ್, ಸಾಸುವೆಘಟ್ಟ, ಸೋಲದೇವನಹಳ್ಳಿಯ ಭಾಗಶಃ, ತರಬನಹಳ್ಳಿ ಮುಖ್ಯ ರಸ್ತೆ, ಹಾವನೂರು ಎಕ್ಸ್ಟಿಎನ್, ಹೆಸರಘಟ್ಟ ಮುಖ್ಯ ರಸ್ತೆ, ಸಿಡೇದಹಳ್ಳಿ, ಭಾಗಶಃ ವಿಶ್ವೇಶರಯ್ಯ ಲೇಔಟ್, ರಾಯಲ್ ಎನ್ಕ್ಲೇವ್, ಬೈರವೇಶ್ವರ ವೃತ್ತ.

ಜುಲೈ 22 ಎಲ್ಲೆಲ್ಲಿ ವಿದ್ಯುತ್ ಕಟ್‌?‌
ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಡಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಯೋಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್ ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿ ಪಿಎಚ್ಎಸ್ ಲೇಔಟ್, ಸೂರ್ಯೋದಯ ನಗರ. 2, ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರಜಕ್ಕೂರು, ವಿಆರ್‌ಎಲ್ ರಸ್ತೆ (ಸಂತೆ ರಸ್ತೆ), ಐಎಎಸ್ ರಸ್ತೆ, ಅರ್ಕಾವತಿ ಲೇಔಟ್.

ವರದಿ:ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss