ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಪ್ಯಾನ್ ಇಂಡಿಯಾ ಸಿನಿಮಾ
ಮತ್ತೆ ಸ್ಯಾಂಡಲ್‌ವುಡ್‌ಗೆ ಕಾಲಿಡ್ತಿದ್ದಾರೆ ಪ್ರಭುದೇವ. ಕನ್ನಡದವರೇ ಆದರೂ ತಮಿಳು ಮತ್ತು ಹಿಂದಿಯಲ್ಲಿ ಸ್ಟಾರ್ ನಿರ್ದೇಶಕನಾಗಿ, ಕೊರಿಯೋಗ್ರಫರ್ ಆಗಿ ವಿಜೃಂಬಿಸ್ತಿರೋ ಇಂಡಿಯನ್ ಮೈಕೆಲ್ ಜಾಕ್ಸನ್ ಪ್ರಭುದೇವ ಮತ್ತೆ ಕನ್ನಡಕ್ಕೆ ರ‍್ತಿದ್ದಾರೆ.
ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್ ಅವರು ಈ ತನಕ ನಿರ್ಮಾಣ ಮಾಡಿರುವ ಚಿತ್ರಗಳು ಸಾಕಷ್ಟು ಹೆಸರು
ಮಾಡಿದೆ.
ಈಗ ಈ ಪ್ರತಿಷ್ಠಿತ ಸಂಸ್ಥೆಯ ಮೂಲಕ ಪ್ಯಾನ್ ಇಂಡಿಯಾ ಸಿನಿಮಾವೊಂದು ನಿರ್ಮಾಣವಾಗಲಿದೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ಬರಲಿದೆ.
ಖ್ಯಾತ ಬಹುಭಾಷಾ ನಟ ಹಾಗೂ ತಮ್ಮ ಅಮೋಘ ನೃತ್ಯದ ಮೂಲಕ ವಿಶ್ವದಾದ್ಯಂತ ಹೆಸರು ಮಾಡಿರುವ ಪ್ರಭುದೇವ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ಸದ್ಯದಲ್ಲೇ ಈ ಚಿತ್ರದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಮಾಹಿತಿ ನೀಡುವುದಾಗಿ ಸಂದೇಶ್ ನಾಗರಾಜ್ ತಿಳಿಸಿದ್ದಾರೆ.