ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ತೀವ್ರವಾದ ಕಾನೂನು ಸಂಕಷ್ಟ ಎದುರಾಗಿದೆ. ಹೌದು ‘ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧದ ಮಾನಹಾನಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಕೆಲ ತಿಂಗಳ ಹಿಂದೆ ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ಪ್ರದೀಪ್ ಈಶ್ವರ್ ಅವರು ಪ್ರತಾಪ್ ಸಿಂಹ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಇದರಿಂದ ನೊಂದ ಪ್ರತಾಪ್ ಸಿಂಹ ಅವರು ಪ್ರದೀಪ್ ಈಶ್ವರ್ ವಿರುದ್ಧ ಕೋರ್ಟ್ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣದ ವಿಚಾರಣೆಗೆ ಶಾಸಕ ಪ್ರದೀಪ್ ಈಶ್ವರ್ ಹಾಗೂ ಅವರ ಪರ ವಕೀಲರು ಹಾಜರಾಗದ ಹಿನ್ನೆಲೆಯಲ್ಲಿ ಕೋರ್ಟ್ ಈ ಗಂಭೀರ ಕ್ರಮ ಕೈಗೊಂಡಿದೆ.
ನ್ಯಾಯಮೂರ್ತಿ ಸಂದೀಪ್ ಪಾಟೀಲ್ ಅವರ ಪೀಠದಲ್ಲಿ ಈ ವಿಚಾರಣೆ ನಡೆದಿದ್ದು, ಕೋರ್ಟ್ ಆದೇಶಕ್ಕೆ ಸರಿಯಾಗಿ ಸ್ಪಂದಿಸದ ಕಾರಣ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲಾಗಿದೆ. ಅಲ್ಲದೆ, ಪ್ರಕರಣದ ಮುಂದಿನ ವಿಚಾರಣೆಯನ್ನು ಮುಂಬರುವ ಸೆಪ್ಟೆಂಬರ್ 7ನೇ ತಾರೀಕಿಗೆ ನ್ಯಾಯಾಲಯ ಮುಂದೂಡಿದೆ. ವಿಚಾರಣೆಯ ದಿನ ಶಾಸಕರು ಕೋರ್ಟ್ಗೆ ಹಾಜರಾಗುತ್ತಾರಾ ಅಥವಾ ಮುಂದಿನ ಕಾನೂನು ಹೆಜ್ಜೆಗಳೇನು? ಎಂಬುದು ಈಗ ಕುತೂಹಲ ಮೂಡಿಸಿದೆ.
ಎಸ್ ‘ಮಾಜಿ ಸಂಸದರ ಜೊತೆಗಿನ ಮಾತಿನ ಸಮರವು ಈಗ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಈ ಪ್ರಕರಣದ ಮುಂದಿನ ಬೆಳವಣಿಗೆಗಳ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಅದರ ಜೊತೆಗೆ ‘ರಾಜಕೀಯ ವಲಯದಲ್ಲಿಯೂ ಈ ಸುದ್ದಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ನಿಮ್ಮ ಅನಿಸಿಕೆ ಏನು ಕಾಮೆಂಟ್ ಮಾಡಿ..
