Saturday, May 10, 2025

Latest Posts

ಪ್ರಜ್ವಲ್ ಪೆಂಡ್ರೈವ್ ಕೇಸ್: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

- Advertisement -

Political News: ಚುನಾವಣೆ ಸಮಯದಲ್ಲಿ ರಾಜಕಾರಣಿಗಳ ಅಸಲಿ ಮುಖ ಬಯಲಿಗೆ ಬರುತ್ತದೆ ಅಂತಾ ಹಲವರಿಗೆ ಗೊತ್ತು. ಅದೇ ರೀತಿ ಈ ಲೋಕಸಭಾ ಚುನಾವಣೆಯ ವೇಳೆ ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ವೀಡಿಯೋ ಒಳಗೊಂಡ ಪೆನ್‌ಡ್ರೈವ್ ಹಾಸನದಲ್ಲಿ ಓಡಾಡುತ್ತಿದ್ದು, ಇದರಲ್ಲಿ ಪ್ರಜ್ವಲ್ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ದಾರೆಂದು ಹೇಳಲಾಗಿದೆ.

ಪೆನ್‌ಡ್ರೈವ್ ಪ್ರಕರಣ ಬೆಳಕಿಗೆ ಬಂದ ಬಳಿಕ, ಪ್ರಜ್ವಲ್ ವಿರುದ್ಧ ಹಲವರು ವಾಗ್ದಾಳಿ ನಡೆಸಿದ್ದು, ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮಾಡಿದವನ ಮೇಲೆ ಪ್ರಕರಣ ದಾಖಲಾಗಲೇಬೇಕು ಎಂದು ಪಟ್ಟು ಹಿಡಿದ್ದಾರೆ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡುವ ಮೂಲಕ, ಪ್ರಜ್ವಲ್ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಿಎಂ ಹೇಳಿದ್ದಾರೆ.

- Advertisement -

Latest Posts

Don't Miss