ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ​​ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡಿದೆ.
ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಜ್ವಲ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ಅತ್ಯಾಚಾರ ಆರೋಪ ಪ್ರಕರಣದಲ್ಲಿ 42ನೇ ಎಸಿಎಂಎಂ ನ್ಯಾಯಾಲಯವು, ಪ್ರಜ್ವಲ್​ ರೇವಣ್ಣ ಅವರನ್ನು ಜೂನ್ 29ರವರೆಗೂ ಎಸ್​ಐಟಿ ಕಸ್ಟಡಿಗೆ ನೀಡಿದೆ. ಹೀಗಾಗಿ ಪ್ರಜ್ವಲ್​ ಇನ್ನೂ ಮೂರು ದಿನಗಳ ಕಾಲ ಎಸ್​ಐಡಿ ಕಸ್ಟಡಿಯಲ್ಲಿ ವಿಚಾರಣೆ ಎದುರಿಸಲಿದ್ದಾರೆ.

About The Author