Hassan News : ಸುಳ್ಳು ದಾಖಲೆ ನೀಡಿ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂಬ ಆರೋಪದಡಿ ಹಾಸನ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ 4 ವಾರಗಳ ತಡೆ ನೀಡಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ದಾಖಲೆಗಳನ್ನು ನೀಡಿ ಪ್ರಜ್ವಲ್ ರೇವಣ್ಣ ಹಾಸನದಿಂದ ಗೆದ್ದಿದ್ದಾರೆ ಎಂದು ಸೋತ ಅಭ್ಯರ್ಥಿ ಎ.ಮಂಜು ದೂರು ನೀಡಿದ್ರು. ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ಮಾಡಿದ ಕರ್ನಾಟಕ ಹೈಕೋರ್ಟ್ ಸೆಪ್ಟಂಬರ್ 1ರಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಸಂಸದ ಸ್ಥಾನದಿಂದ ಅಸಿಂಧುಗೊಳಿಸಿ ಆದೇಶ ಹೊರಡಿಸಿತ್ತು. ಇನ್ನು ಅಮಾನತು ಆದೇಶಕ್ಕೆ ತಾತ್ಕಾಲಿಕ ತಡೆ ನೀಡುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದರೂ, ಅದನ್ನು ನ್ಯಾಯಾಲಯ ತಿರಸ್ಕರಿಸಿತ್ತು.
ಹೈಕೋರ್ಟ್‌ನಲ್ಲಿ ಸೋಲನುಭವಿಸಿ ಸಂಸದ ಸ್ಥಾನದಿಂದ ಅಸಿಂಧುಗೊಂಡ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ, ಈ ಅರ್ಜಿಯನ್ನು ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್‌ನಿಂದ ಹೈಕೋರ್ಟ್ ಅಸಿಂಧುಗೊಳಿಸಿದ್ದ ಆದೇಶವನ್ನು 4 ವಾರಗಳವರೆಗೆ ತಾತ್ಕಾಲಿಕವಾಗಿ ತಡೆ ಹಿಡಿದಿದೆ. ಆದರೆ, ಕೆಲವು ಷರತ್ತುಗಳನ್ನು ವಿಧಿಸಿದೆ. ಲೋಕಸಭೆಯಲ್ಲಿ ಅಧಿವೇಶನದಲ್ಲಿ ಸಂಸದ ಪ್ರಜ್ವಲ್ ರೇವಣ್ಣಗೆ ಯಾವುದೇ ವೋಟಿಂಗ್ ಪವರ್ ಇರುವುದಿಲ್ಲ. ಸರ್ಕಾರದಿಂದ ಬರುವ ಭತ್ಯೆಗಳನ್ನ ಪಡೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಪೀಠವು ಆದೇಶಿಸಿದೆ.
Thalak : ವಿದೇಶದಿಂದಲೇ ವಾಟ್ಸಾಪ್ ನಲ್ಲಿ ತ್ರಿವಳಿ ತಲಾಕ್ ನೀಡಿದ ಪತಿ : ಬ್ಯಾನ್ ಆದರೂ ಮುಂದುವರೆದ ಪದ್ಧತಿ..!