Monday, July 22, 2024

Latest Posts

Prajwal Revanna : ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್…!

- Advertisement -

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಜೂನ್ 18ರವರೆಗೆ ಪ್ರಜ್ವಲ್ ರೇವಣ್ಣಗೆ ಸೈಬರ್ ಕ್ರೈಮ್ ಎಫ್‍ಐಆರ್ ನಂ 2\2024 ರಲ್ಲಿ ಎಸ್‍ಐಟಿ ಕಸ್ಟಡಿಗೆ ನೀಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 12 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಆತನ್ನು ಕಸ್ಟಡಿಗೆ ನೀಡುವಂತೆ ಎಸ್‍ಐಟಿ ಅಧಿಕಾರಿಗಳು ಮನವಿ ಮಾಡಿದ್ದರು.

ಕೆ.ಆರ್ ನಗರ ಸಂತ್ರಸ್ತೆ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಈಗಾಗಲೇ ಎರಡು ಪ್ರಕರಣಗಳಲ್ಲಿ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆದು ಎಸ್‍ಐಟಿ ವಿಚಾರಣೆ ನೆಡೆಸುತ್ತಿದೆ. ಇದೀಗ 3ನೇ ಪ್ರಕರಣದಲ್ಲೂ ಜಾಮೀನು ಅರ್ಜಿ ವಜಾಗೊಂಡಿದೆ.

ಇತ್ತೀಚಿಗಷ್ಟೇ ಲೈಂಗಿಕ ಕಿರುಕುಳ ಪ್ರಕರಣದಲ್ಲಿ 42ನೇ ಎಸಿಎಂಎಂ ನ್ಯಾಯಾಲಯವು ಪ್ರಜ್ವಲ್ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಈ ವೇಳೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು 6 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಪರಪ್ಪನ ಅಗ್ರಹಾರದಲ್ಲಿ ಊಟ ಎನು ಗೊತ್ತಾ..?

ಕಳೆದ ಎರಡು ದಿನಗಳ ಹಿಂದೆ ಪ್ರಜ್ವಲ್ ರೇವಣ್ಣಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದು, ಈ ಹಿನ್ನಲೆಯಲ್ಲಿ ಪ್ರಜ್ವಲ್ ರೇವಣ್ಣರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ವಿಚಾರಣಾಧೀನ ಖೈದಿ ಸಂಖ್ಯೆ 5664 ನೀಡಲಾಗಿತ್ತು.ಬಳಿಕ ಪ್ರಜ್ವಲ್ ರೇವಣ್ಣ,ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಮೆನುವಿನಂತೆ ಮುದ್ದೆ,ಅನ್ನ,ಸಾಂಬರ್,ಪಲ್ಯ ನೀಡಲಾಗಿತ್ತು.

ಅತ್ಯಾಚಾರ ಆರೋಪ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ಎಸ್‍ಐಟಿ ಕಸ್ಟಿಡಿ ಅವಧಿ ಅಂತ್ಯವಾದ ಹಿನ್ನಲೆಯಲ್ಲಿ ಎಸ್‍ಐಟಿ ಅಧಿಕಾರಿಗಳು ಜೂ.10 ರಂದು ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‍ಗೆ ಹಾಜರುಪಡಿಸಿದ್ದರು. ವಿಚಾರಣೆ ನೆಡೆಸಿದ ಕೋರ್ಟ್ ಪ್ರಜ್ವಲ್ ರೇವಣ್ಣ ಅವರಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇದೀಗ ಮತ್ತೆ ಕೋರ್ಟ್‍ಗೆ ಹಾಜರುಪಡಿಸಿ ಪುನಃ ಎಸ್‍ಐಟಿ ಅಧಿಕಾರಿಗಳು ತಮ್ಮ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ಶುರುಮಾಡಿದ್ದಾರೆ.

- Advertisement -

Latest Posts

Don't Miss