Saturday, July 12, 2025

Latest Posts

ಮಾತು ತಪ್ಪಿದ ಸಿ ಎಂ ಸಿದ್ಧರಾಮಯ್ಯ ವಿರುದ್ಧ ಪ್ರಕಾಶ್ ರಾಜ್ ಗರಂ!

- Advertisement -

ಬೆಂಗಳೂರಿನ ದೇವನಹಳ್ಳಿ ರೈತರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಜುಲೈ 15ರವರೆಗೆ ಕಾಲಾವಕಾಶ ಕೇಳಿದ್ದರು. ಆದರೆ ಮುಖ್ಯಮಂತ್ರಿಗಳು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡುವ ಮೂಲಕ ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ನಟ ಪ್ರಕಾಶ ರಾಜ್ ವಾಗ್ದಾಳಿ ನಡೆಸಿದ್ದಾರೆ.

ದೇವನಹಳ್ಳಿಯಲ್ಲಿ ರೈತರ ಜಮೀನು ಕಿತ್ತುಕೊಳ್ಳಲು ಮುಂದಾಗಿದೆ. ಅಲ್ಲಿ 1700 ಎಕರೆಯಲ್ಲಿ ಡಿಫೆನ್ಸ್ ಕಾರಿಡಾರ್ ಸ್ಥಾಪನೆಗೆ ರಾಜ್ಯ ಸರ್ಕಾರ ಈಗ ಕೇಂದ್ರದ ಅನುಮತಿ ಕೇಳಿದೆ. ಕಾರಿಡಾರ್‌ಗೆ ಏಕೆ ಇಷ್ಟು ಜಾಗ ಬೇಕು ಎಂಬುದನ್ನು ಅವರು ನಕ್ಷೆ ಸಮೇತ ವಿವರಿಸಲಿ ಎಂದು ಇಂದು ಪ್ರಕಾಶ್‌ ರಾಜ್ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ. ಕಾರಿಡಾರ್ ಗೆ ಕೇವಲ 100 ಎಕರೆ ಬಳಸಿ ಉಳಿದ ಜಮೀನಿನಲ್ಲಿ ಐಷಾರಾಮಿ ಹೋಟೆಲ್ ಕಟ್ಟುತ್ತಾರೆ. ಅಲ್ಲಿ ನಮ್ಮ ರೈತರು ಕೂಲಿಯಾಳು ಆಗಬೇಕಾಗುತ್ತದೆ ಎಂದು ಪ್ರಕಾಶ್ ರಾಜ್‌ ಎಚ್ಚರಿಸಿದ್ದಾರೆ.

ರಾಜ್ಯ ಸರ್ಕಾರ ಯಾರೋ ಮೂವರು ರೈತರನ್ನು ಮಧ್ಯ ಕರೆ ತಂದು ಚಳವಳಿ ಒಡೆಯುವ ಪ್ರಯತ್ನ ಮಾಡುತ್ತಿದೆ. ಹಳ್ಳಿಗಳಿಗೆ ಪುಡಾರಿಗಳನ್ನು ಕಳುಹಿಸಿ ಹೆದರಿಸುತ್ತಿದೆ. ಹಸಿರು ವಲಯ ಮಾಡುತ್ತೇವೆ ಎಂಬ ನಾಟಕ ಆಡಿ ಜನರನ್ನು ಹೆದರಿಸುತ್ತಿದ್ದ ನಿಮ್ಮ ನಾಟಕ ನಮ್ಮೆಲ್ಲರ ಕಣ್ಣಿಗೆ ಕಾಣಿಸುತ್ತಿದೆ. 15 ರಂದು ರೈತ ಪರ ನಿರ್ಧಾರ ಪ್ರಕಟಿಸದೇ ಇದ್ದರೆ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

 

ವರದಿ:ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss